ಕನಸಿನಲ್ಲಿ ಆಗಾಗ್ಗೆ ಈ ವಸ್ತುಗಳ ದರ್ಶನ- ಬಂಪರ್ ಲಾಭದ ಸಂಕೇತ

ಸ್ವಪ್ನ ಶಾಸ್ತ್ರದ ಪ್ರಕಾರ, ಕನಸುಗಳು ನಮ್ಮ ಭವಿಷ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಲಾಗುತ್ತದೆ. ಇವು ನಮ್ಮ ಭವಿಷ್ಯದ ಶುಭ-ಅಶುಭ ಸಂಕೇತಗಳನ್ನೂ ಸೂಚಿಸುತ್ತವೆ. 

ಸ್ವಪ್ನ ಶಾಸ್ತ್ರದಲ್ಲಿ ಕನಸಿನ ಅರ್ಥಗಳ ಬಗ್ಗೆ ಉಲ್ಲೇಖಿಸಲಾಗಿದೆ. ಸ್ವಪ್ನ ಶಾಸ್ತ್ರದ ಪ್ರಕಾರ, ಕನಸುಗಳು ನಮ್ಮ ಭವಿಷ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಲಾಗುತ್ತದೆ. ಇವು ನಮ್ಮ ಭವಿಷ್ಯದ ಶುಭ-ಅಶುಭ ಸಂಕೇತಗಳನ್ನೂ ಸೂಚಿಸುತ್ತವೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಸ್ವಪ್ನ ಶಾಸ್ತ್ರದ ಪ್ರಕಾರ, ಕನಸಿನಲ್ಲಿ ಕೆಲವು ವಸ್ತುಗಳನ್ನು ನೋಡುವುದನ್ನು ತುಂಬಾ ಶುಭ ಎಂದು ಪರಿಗಣಿಸಲಾಗಿದೆ. ಕನಸ್ಸಿನಲ್ಲಿ ಕೆಲವು ವಸ್ತುಗಳನ್ನು ಆಗಾಗ್ಗೆ ನೋಡುವುದು ಶೀಘ್ರದಲ್ಲೇ ನೀವು ಶ್ರೀಮಂತರಾಗುತ್ತೀರಿ ಎಂಬುದರ ಸಂಕೇತವಾಗಿದೆ.

2 /5

ಸ್ವಪ್ನ ಶಾಸ್ತ್ರದ ಪ್ರಕಾರ, ಆಗಾಗ್ಗೆ ಕನಸಿನಲ್ಲಿ ಗುಲಾಬಿ ಹೂವನ್ನು ಕಂಡರೆ ಸಂಪತ್ತಿನ ದೇವತೆ ಲಕ್ಷ್ಮಿ ಶೀಘ್ರದಲ್ಲೇ ನಿಮ್ಮ ಮನೆ ಪ್ರವೇಶಿಸಲಿದ್ದಾಳೆ ಎಂಬುದರ ಸಂಕೇತ ಎಂದು ನಂಬಲಾಗಿದೆ.

3 /5

ನೀವು ನಿಮ್ಮ ಕನಸಿನಲ್ಲಿ ಮಳೆಯನ್ನು ಕಾಣುವುದನ್ನು ಕೂಡ ತುಂಬಾ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಕನಸಿನಲ್ಲಿ ಮಳೆಯನ್ನು ಕಂಡರೆ ಶೀಘ್ರದಲ್ಲೇ ನಿಮ್ಮ ಹಳೆಯ ಸಾಲಗಳಿಂದ ಮುಕ್ತಿ ದೊರೆಯಲಿದೆ ಎಂದರ್ಥ.

4 /5

ಆಗಸದಲ್ಲಿ ಚಂದ್ರನನ್ನು ನೋಡಿದರೆ ಮನಸ್ಸಿಗೆ ಸಂತಸವಾಗುತ್ತದೆ. ಅಂತೆಯೇ ಸ್ವಪ್ನ ಶಾಸ್ತ್ರದ ಪ್ರಕಾರ, ಕನಸ್ಸಿನಲ್ಲಿ ಚಂದ್ರನನ್ನು ಕಂಡರೆ ನಿಮ್ಮ ಸಂಪತ್ತು ವೃದ್ಧಿಯಾಗುತ್ತದೆ. ನೀವು ಸಮಾಜದಲ್ಲಿ ಗೌರವವನ್ನೂ ಪಡೆಯುತ್ತೀರಿ ಎಂಬುದನ್ನು ಸೂಚಿಸುತ್ತದೆ.

5 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪೊರಕೆಯನ್ನು ಲಕ್ಷ್ಮಿ ದೇವಿಯ ರೂಪ ಎಂದು ಪರಿಗಣಿಸಲಾಗುತ್ತದೆ. ನೀವು ಕನಸ್ಸಿನಲ್ಲಿ ಪೊರಕೆಯನ್ನು ಕಂಡರೆ ಶೀಘ್ರದಲ್ಲೇ ನಿಮ್ಮ ಜೀವನದಲ್ಲಿ ಸಂತೋಷ- ಸಮೃದ್ಧಿ ತುಂಬಿ ತುಳುಕುತ್ತದೆ ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.