ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಹೊರಹಾಕಿ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸುತ್ತವೆ ಈ 5 ಆಹಾರಗಳು

ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ರಕ್ತದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಆಹಾರವನ್ನು ಸೇವಿಸಬೇಕು.

ಬೆಂಗಳೂರು : ಕೊಲೆಸ್ಟ್ರಾಲ್ ನಲ್ಲಿ ಎರಡು ವಿಧ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟದು. ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಎಚ್‌ಡಿಎಲ್ ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಎಲ್‌ಡಿಎಲ್ ಕೊಲೆಸ್ಟ್ರಾಲ್ ಎಂದು ಕರೆಯಲಾಗುತ್ತದೆ. ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಎಲ್‌ಡಿಎಲ್ ಅಧಿಕವಾಗಿದ್ದರೆ, ಹೃದಯ ಕಾಯಿಲೆ ಮತ್ತು ಪಾರ್ಶ್ವವಾಯುಗಳಂತಹ ಗಂಭೀರ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಎಚ್‌ಡಿಎಲ್ ರಕ್ತನಾಳಗಳಲ್ಲಿ  ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೊರಹಾಕಿ, ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿದ್ದರೆ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸಲು ಆಹಾರ ಕ್ರಮವನ್ನು ಬದಲಾಯಿಸಿಕೊಳ್ಳಬೇಕು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ರಾಗಿ, ಬಾರ್ಲಿ, ರಾಗಿ, ಜೋಳ ಮುಂತಾದ ಧಾನ್ಯಗಳು ಫೈಬರ್ ಮತ್ತು ಇತರ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಇದು ರಕ್ತ ನಾಳಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಹೃದ್ರೋಗದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.  

2 /5

ಫೈಬರ್ ಪ್ರಮಾಣ ಹೆಚ್ಚಿರುವ ಅನೇಕ ಹಣ್ಣುಗಳಿವೆ. ಅವುಗಳೆಂದರೆ - ಸೇಬು, ಪೇರಳೆ, ಪಪ್ಪಾಯಿ, ಅನಾನಸ್ ಇತ್ಯಾದಿ. ಈ ಹಣ್ಣುಗಳು  ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತವೆ. 

3 /5

ಫೋಲೇಟ್ ಮತ್ತು ಮೊನೊಸಾಚುರೇಟೆಡ್ ಕೊಬ್ಬುಗಳು ಆವಕಾಡೊದಲ್ಲಿ ಕಂಡುಬರುತ್ತವೆ. ಇದು ದೇಹದಲ್ಲಿ ಎಚ್‌ಡಿಎಲ್ ಮಟ್ಟವನ್ನು ಕಾಪಾಡಿಕೊಳ್ಳುತ್ತದೆ ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.  

4 /5

ಅಗಸೆ ಬೀಜಗಳು ಮತ್ತು ಅಗಸೆಬೀಜದ ಎಣ್ಣೆಯು ಒಮೆಗಾ 3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಅಗಸೆಬೀಜವು ಸಸ್ಯ-ಆಧಾರಿತ ಆಹಾರವಾಗಿದೆ. ಇದರಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವೆ. ಇದು ಹೃದಯ ಕಾಯಿಲೆಗಳಿಂದ ರಕ್ಷಿಸಳು ಸಹಾಯ ಮಾಡುತ್ತದೆ. 

5 /5

ಬಾದಾಮಿ ಪಿಸ್ತಾ ಕಡಲೆಕಾಯಿಗಳು ಇವೆಲ್ಲವೂ ಆರೋಗ್ಯಕರ ಕೊಬ್ಬಿನ ಮೂಲಗಳಾಗಿರುವ ಬೀಜಗಳಾಗಿವೆ. ಇದು ಹೃದಯವನ್ನು ಆರೋಗ್ಯಕರವಾಗಿಡಲು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.