High Cholesterol ಅನ್ನು ಒಂದೇ ವಾರದಲ್ಲಿ ನಿಯಂತ್ರಿಸುತ್ತೆ ಈ ಆಹಾರಗಳು
ನಿತ್ಯ ಹಣ್ಣುಗಳನ್ನು ಸೇವಿಸುವುದರಿಂದ ದೇಹದಲ್ಲಿ ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ವಾಸ್ತವವಾಗಿ, ಹಣ್ಣುಗಳ ಸೇವನೆಯು ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ತುಂಬಾ ಪ್ರಯೋಜನಕಾರಿ ಆಗಿದೆ. ಅದರಲ್ಲೂ ಸೇಬು, ಬಾಳೆಹಣ್ಣು, ಪೇರಳೆ, ದಾಳಿಂಬೆ ಸೇವನೆಯಿಂದ ಕೊಲೆಸ್ಟ್ರಾಲ್ ನಿಯಂತ್ರಣ ಸುಲಭವಾಗುತ್ತದೆ.
ನೀವು ಹೈ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ ಇದರಿಂದ ಪರಿಹಾರ ಪಡೆಯಲು ನಿಮ್ಮ ಡಯಟ್ ನಲ್ಲಿ ಅಗಸೆ ಬೀಜಗಳನ್ನು ತಪ್ಪದೇ ಸೇವಿಸಿ.
ಸೋಯಾಬೀನ್ ಸೇವನೆಯಿಂದಲೂ ಕೂಡ ಕೊಲೆಸ್ಟ್ರಾಲ್ ನಿಯಂತ್ರಣ ಸುಲಭವಾಗುತ್ತದೆ. ವಾಸ್ತವವಾಗಿ, ಸೋಯಾಬೀನ್ ನಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಕಂಡು ಬರುತ್ತದೆ. ಇದು ದೇಹಕ್ಕೆ ಶಕ್ತಿ ನೀಡುವುದರ ಜೊತೆಗೆ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿಯೂ ಪರಿಣಾಮಕಾರಿ ಆಗಿದೆ.
ವೈದ್ಯರ ಪ್ರಕಾರ, ಹೈ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಸಾಕಷ್ಟು ತರಕಾರಿಗಳನ್ನು ಸೇವಿಸಬೇಕು ಎಂದು ಹೇಳಲಾಗುತ್ತದೆ. ಅದರಲ್ಲೂ ಗಡ್ಡೆ ಕೋಸು, ಹೂ ಕೋಸು, ಟೊಮಾಟೊ, ಕ್ಯಾರೆಟ್, ಹಸಿರು ಸೊಪ್ಪುಗಳು ಎಲ್ಲವೂ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿ ಬಹಳ ಪ್ರಯೋಜನಕಾರಿ ಆಗಿವೆ ಎಂದು ಹೇಳಲಾಗುತ್ತದೆ.
ಸಿರಿ ಧಾನ್ಯಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದೇ ಇದೆ. ಸಿರಿ ಧಾನ್ಯಗಳ ಸೇವನೆಯಿಂದ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕಂಟ್ರೋಲ್ ಮಾಡಬಹುದು ಎನ್ನಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.