Fruits for diabetes:ಕೆಲವು ಹಣ್ಣುಗಳ ಸೇವನೆಯು ಮಧುಮೇಹದಲ್ಲಿ ಪ್ರಯೋಜನಕಾರಿಯಾಗಿದೆ. ಈ ಹಣ್ಣುಗಳನ್ನು ಸೇವಿಸಿದ ನಂತರ ರಕ್ತದಲ್ಲಿನ ಸಕ್ಕರೆಯ ಮಟ್ಟ ತ್ವರಿತವಾಗಿ ಕಡಿಮೆಯಾಗುತ್ತದೆ.
Fruits for diabetes : ಮಧುಮೇಹ ದೀರ್ಘಕಾಲದ ಕಾಯಿಲೆ. ಈ ಕಾಯಿಲೆಗೆ ಜೀವನ ಪರ್ಯಂತ ಔಷಧಿ ತೆಗೆದುಕೊಳ್ಳಬೇಕಾಗುತ್ತದೆ. ಇದು ನಿಮ್ಮ ದೇಹವನ್ನು ಕ್ರಮೇಣ ದುರ್ಬಲಗೊಳಿಸುತ್ತಾ ಬರುತ್ತದೆ. ಮಧುಮೇಹ ಹೊಂದಿರುವವರು ಸಕ್ಕರೆ, ಆಲೂಗಡ್ಡೆ ಮತ್ತು ಸಿಹಿ ಹಣ್ಣುಗಳಿಂದ ದೂರವಿರಬೇಕು. ಏಕೆಂದರೆ ಅವುಗಳಲ್ಲಿರುವ ನೈಸರ್ಗಿಕ ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಕೆಲಸ ಮಾಡುತ್ತದೆ. ಆದರೆ, ಕೆಲವು ಹಣ್ಣುಗಳ ಸೇವನೆಯು ಮಧುಮೇಹದಲ್ಲಿ ಪ್ರಯೋಜನಕಾರಿಯಾಗಿದೆ. ಈ ಹಣ್ಣುಗಳನ್ನು ಸೇವಿಸಿದ ನಂತರ ರಕ್ತದಲ್ಲಿನ ಸಕ್ಕರೆಯ ಮಟ್ಟ ತ್ವರಿತವಾಗಿ ಕಡಿಮೆಯಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ (ಎಡಿಎ) ವರದಿಯ ಪ್ರಕಾರ, ಮಧುಮೇಹದಲ್ಲಿ ಹಣ್ಣುಗಳ ಸೇವನೆಯು ಬಹಳ ಮುಖ್ಯವಾಗಿದೆ. ಹಣ್ಣುಗಳು ತೂಕ ನಷ್ಟ, ಕರುಳಿನ ವ್ಯವಸ್ಥೆ ಮತ್ತು ಫ್ಯಾಟ್ ಬರ್ನ್ ಮಾಡುವ ಕೆಲಸ ಮಾಡುತ್ತದೆ. ಹಾಗೆಯೇ ದೇಹವನ್ನು ಪೋಷಿಸುವ ಅಗತ್ಯವಾದ ಜೀವಸತ್ವಗಳು, ಖನಿಜಗಳು ಮತ್ತು ಸೂಕ್ಷ್ಮ ಪೋಷಕಾಂಶಗಳು ಹಣ್ಣುಗಳಲ್ಲಿ ಕಂಡುಬರುತ್ತವೆ.
ಪೇರಳೆ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪೇರಳೆ ಹಣ್ಣು ಮತ್ತು ಅದರ ಎಲೆಗಳು ಮಧುಮೇಹವನ್ನು ನಿಯಂತ್ರಿಸಲು ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಪೇರಳೆ ಹಣ್ಣಿನಂತೆ ಪಿಯರ್ಸ್ ಕೂಡಾ ಮಧುಮೇಹ ರೋಗಿಗಳಿಗೆ ಸಹಾಯಕವಾಗಿದೆ. ಪೇರಳೆ ಹಣ್ಣಿನಲ್ಲಿ ಆಂಥೋಸಯಾನಿನ್ ಕಂಡುಬರುತ್ತದೆ. ಇದು ಪ್ರಬಲವಾದ ಉತ್ಕರ್ಷಣ ನಿರೋಧಕವಾಗಿದೆ. ಅಲ್ಲದೆ ಇದು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಹಣ್ಣು.ಹೀಗಾಗಿ ಈ ಹಣ್ಣು ಮಧುಮೇಹ ತಡೆಯಲು ಸಹಾಯ ಮಾಡುತ್ತದೆ.
ರುಚಿಕರವಾದ ಹಸಿರು ಸೇಬುಗಳು ಕೆಂಪು ಸೇಬಿನಂತೆಯೇ ಪೌಷ್ಟಿಕ ಅಂಶಗಳ ಆಗರವಾಗಿದೆ. ಮಧ್ಯಮ ಗಾತ್ರದ ಸೇಬು 90 ಕ್ಯಾಲೋರಿಗಳನ್ನು ಮತ್ತು 25 ಗ್ರಾಂ ಕಾರ್ಬೋಹೈಡ್ರೇಟ್ ಗಳನ್ನೂ ಹೊಂದಿರುತ್ತದೆ. ಇದಲ್ಲದೆ, ಅವುಗಳಲ್ಲಿ ನಾರಿನ ಪ್ರಮಾಣವು ಅಧಿಕ. ಇದು ಮಧುಮೇಹ ರೋಗಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.
ನೆಲ್ಲಿಕಾಯಿ ಮತ್ತು ಇತರ ಹಣ್ಣುಗಳ ಸೇವನೆಯು ಮಧುಮೇಹ ರೋಗಿಗಳಿಗೆ ಬಹಳ ಪ್ರಯೋಜನಕಾರಿಯಾಗಿದೆ. ನೆಲ್ಲಿಕಾಯಿಯನ್ನು ಅನೇಕ ಪೋಷಕಾಂಶಗಳಿಂದ ಕೂಡಿದ ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಸಿ ಮತ್ತು ವಿಟಮಿನ್‌ಗಳು ಕಂಡುಬರುತ್ತವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. (ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)