ಹಿತ್ತಲಲ್ಲೇ ಸಿಗುವ ಈ ಎಲೆಗಳ ನೀರು ಹಚ್ಚಿದರೆ ಬಿಳಿ ಕೂದಲು ಸಂಪೂರ್ಣವಾಗಿ ಕಪ್ಪಾಗುತ್ತದೆ !
ಪೇರಳೆ ಎಲೆಯನ್ನು ಬಳಸುವುದರಿಂದ ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಬಹುದು. ಪೇರಳೆ ಎಲೆಯನ್ನು ತೆಗೆದುಕೊಂಡು ಒಂದು ಪಾತ್ರೆಯಲ್ಲಿ ಹಾಕಿ ಅದಕ್ಕೆ ನೀರು ಸೇರಿಸಬೇಕು. ಈಗ ಆ ನೀರಿನ ಬಣ್ಣ ಬದಲಾಗುವವರೆಗೆ ಕುದಿಸಬೇಕು. ನಂತರ ನೀರನ್ನು ತಣ್ಣಗಾಗಿಸಿ ಕೂದಲಿಗೆ ಹಚ್ಚಬೇಕು. ನಿಯಮಿತವಾಗಿ ಹೀಗೆ ಮಾಡಿದರೆ ಬಿಳಿ ಕೂದಲು ಕಪ್ಪಾಗುತ್ತದೆ.
ನಿಮ್ಮ ಕೂದಲಿಗೆ ಅನುಸಾರವಾಗಿ ಪೇರಳೆ ಎಲೆಗಳನ್ನು ತೆಗೆದುಕೊಂಡು ಅರೆದು ಪೇಸ್ಟ್ ಮಾಡಿಕೊಳ್ಳಿ. ಹೀಗೆ ಮಾಡಿಕೊಂಡ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ ಸುಮಾರು 30 ನಿಮಿಷಗಳವರೆಗೆ ಬಿಡಿ. ನಂತರ ಕೂದಲನ್ನು ಚೆನ್ನಾಗಿ ತೊಳೆಯಿರಿ. ಹೀಗೆ ಮಾಡುವುದರಿಂದಲೂ ಬಿಳಿ ಕೂದಲು ಕಪ್ಪಾಗುವುದು.
ಮಾವಿನ ಎಲೆ ಕೂಡಾ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. ಮಾವಿನ ಎಲೆಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಆ ನೀರನ್ನು ಕೂದಲಿಗೆ ಹಚ್ಚಿ ನಂತರ ಕೂದಲನ್ನು ತೊಳೆಯಬೇಕು. ಹೀಗೆ ಮಾಡಿದರೆ ಬಿಳಿ ಕೂದಲು ಕಪ್ಪಾಗುವುದು.
ಕರಿಬೇವು ಬಿಳಿ ಕೂದಲನ್ನು ಕಪ್ಪಾಗಿಸಲು ಇರುವ ಬೆಸ್ಟ್ ಮನೆ ಮದ್ದು. ಕರಿಬೇವಿನ ಎಲೆಗಳನ್ನು ಕುದಿಸಿ ಅದರ ನೀರನ್ನು ಕೂದಲಿಗೆ ಹಚ್ಚಿದರೂ ಕೂದಲು ಕಪ್ಪಾಗುವುದು.
ಕರಿಬೇವಿನ ಎಲೆಯನ್ನು ಅರೆದು ಕೂದಲಿಗೆ ಹಚ್ಚುವುದರಿಂದ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು. (ಸೂಚನೆ : ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.)