ಬಾಲಿವುಡ್ ಶೇಕ್ ಶೇಕ್ ಮಾಡಲು ಬರುತ್ತಿದ್ದಾರೆ ಈ ಸೌತ್ ಚಿತ್ರರಂಗದ ಸ್ಟಾರ್ ಗಳು..!

ಬಾಲಿವುಡ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಸೌತ್ ಚಿತ್ರರಂಗದ ತಾರೆಯರು ಸಜ್ಜಾಗಿದ್ದಾರೆ.

ಬಾಲಿವುಡ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಸೌತ್ ಚಿತ್ರರಂಗದ ತಾರೆಯರು ಸಜ್ಜಾಗಿದ್ದಾರೆ. ಶೀಘ್ರವೇ ಈ ಸೌತ್ ಸ್ಟಾರ್ಸ್ ದಾಳಿಗೆ ಬಾಲಿವುಡ್ ಶೇಕ್ ಶೇಕ್ ಆಗಲಿದೆ. ಬಾಲಿವುಡ್‌ನ ದೊಡ್ಡ ಸ್ಟಾರ್ ಗಳ ಗದ್ದುಗೆ ಅಪಾಯದಲ್ಲಿದೆ. ಯಾರು ಈ ದಕ್ಷಿಣ ಭಾರತೀಯ ಚಿತ್ರರಂಗದ ತಾರೆಯರು ಅಂತೀರಾ..? ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿರಿ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /6

ನಾಗ ಚೈತನ್ಯ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ಅಮೀರ್ ಖಾನ್ ಅವರ ಈ ಚಿತ್ರದಲ್ಲಿ ಕರೀನಾ ಕಪೂರ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಈ ಚಿತ್ರವು 14 ಏಪ್ರಿಲ್ 2022 ರಂದು ಬಿಡುಗಡೆಯಾಗಲಿದೆ.

2 /6

‘ಮೈದಾನ’(Maidaan) ಚಿತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿದ್ದು, ಫುಟ್ಬಾಲ್ ಕೋಚ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು 3ನೇ ಜೂನ್ 2022 ರಂದು ಬಿಡುಗಡೆಯಾಗುತ್ತಿದೆ.

3 /6

‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ್ ದೇವರಕೊಂಡ ‘ಲೈಗರ್’ ಚಿತ್ರದ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಅವರೊಂದಿಗೆ ಅನನ್ಯಾ ಪಾಂಡೆ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಇದರಲ್ಲಿ ವಿಜಯ್ ಅಪಾಯಕಾರಿ ಫೈಟರ್ ಆಗಿ ಕಾಣಿಸಿಕೊಂಡಿದ್ದಾರೆ.

4 /6

‘Merry Christmas’ ಚಿತ್ರದಲ್ಲಿ ವಿಜಯ್ ಸೇತುಪತಿ ಮತ್ತು ಕತ್ರಿನಾ ಕೈಫ್ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀರಾಮ್ ರಾಘವನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದಲ್ಲದೆ ವಿಜಯ್ ‘ಮುಂಬೈಕರ್’ ಚಿತ್ರದ ಭಾಗವಾಗಲಿದ್ದಾರೆ.

5 /6

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಚಿತ್ರದಲ್ಲಿ ನಯನತಾರಾ ನಟಿಸಲಿದ್ದಾರೆ. ಈ ಚಿತ್ರವನ್ನು ದಕ್ಷಿಣದ ಖ್ಯಾತ ನಿರ್ದೇಶಕ ‘ಅಟ್ಲಿ’ ನಿರ್ದೇಶಿಸಲಿದ್ದಾರೆ.

6 /6

‘ಮಿಷನ್ ಮಜ್ನು’ ಚಿತ್ರದ ಮೂಲಕ ರಶ್ಮಿಕಾ ಮಂದಣ್ಣ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.