ಈ ಮಸಾಲೆಗಳಿಂದ ಕರುಳಿನ ಅಸ್ವಸ್ಥತೆಗೆ ಸಿಗುತ್ತೆ ಸುಲಭ ಪರಿಹಾರ

Spices To Improve Intestinal Problem: ಆಯುರ್ವೇದದ ಪ್ರಕಾರ, ಕರುಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಅದುಗೆಮನೆಯಲ್ಲಿರುವ ಕೆಲವು ಮಸಾಲೆ ಪದಾರ್ಥಗಳು ಬಹಳ ಪ್ರಯೋಜನಕಾರಿ ಆಗಿವೆ. 

Spices To Improve Intestinal Problem: ಕರುಳು ನಮ್ಮ ದೇಹದ ಅತಿ ಮುಖ್ಯವಾದ ಅಂಗ. ಇದನ್ನು ದೇಹದ ಎರಡನೇ ಮೆದುಳು ಎಂತಲೂ ಕರೆಯಲಾಗುತ್ತದೆ. ಜೀರ್ಣಕ್ರಿಯೆಗೆ ನೇರವಾಗಿ ಕಾರಣವಾಗಿರುವ ಕರುಳಿನ ಆರೋಗ್ಯ ಚೆನ್ನಾಗಿದ್ದರೆ ನಮ್ಮ ಆರೋಗ್ಯವೂ ಚೆನ್ನಾಗಿರುತ್ತದೆ. ಆಯುರ್ವೇದದ ಪ್ರಕಾರ, ಕರುಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಅದುಗೆಮನೆಯಲ್ಲಿರುವ ಕೆಲವು ಮಸಾಲೆ ಪದಾರ್ಥಗಳು ಬಹಳ ಪ್ರಯೋಜನಕಾರಿ ಆಗಿವೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ನಾವು ಸೇವಿಸುವ ಆಹಾರಗಳು ನಮ್ಮ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಅದರಲ್ಲೂ ಕರುಳಿನಲ್ಲಿನ ಅಸಮರ್ಪಕ ಕಾರ್ಯದಿಂದಾಗಿ ಕರುಳಿನಲ್ಲಿ ಕೆಟ್ಟ ಬ್ಯಾಕ್ಟೀರಿಯಾಗಳು ಹೆಚ್ಚಾಗುವುದರಿಂದ ಆಯಾಸ, ಹೊಟ್ಟೆ ನೋವು, ಮಲಬದ್ಧತೆ, ಅತಿಸಾರ, ಆಮ್ಲೀಯತೆ, ನಿದ್ರಾಹೀನತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಆದರೆ, ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಕೆಲವು ಮಸಾಲೆ ಪದಾರ್ಥಗಳನ್ನು ಬಳಸಿ ನೀವು ನಿಮ್ಮ ಕರುಳಿನ ಆರೋಗ್ಯವನ್ನು ಸುಧಾರಿಸಬಹುದು. ಅವುಗಳು ಯಾವುವು ಎಂದು ತಿಳಿಯೋಣ...

2 /6

ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನದ ಬಳಕೆಯೂ ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳನ್ನು ವೃದ್ಧಿಸುತ್ತದೆ. ಇದರಿಂದ ಕರುಳಿನ ಆರೋಗ್ಯ ಸುಧಾರಿಸುತ್ತದೆ.

3 /6

ಶುಂಠಿಯಲ್ಲಿ ಜಿಂಜರಾಲ್ ಎಂಬ ಸಂಯುಕ್ತವು ಕಂಡು ಬರುತ್ತದೆ, ಇದು ಜಠರಗರುಳಿನ ಚಟುವಟಿಕೆಯನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ.  ನೀವು ನಿಯಮಿತವಾಗಿ ಆಹಾರದಲ್ಲಿ ಶುಂಠಿಯನ್ನು ಸೇವಿಸುವುದರಿಂದ ಅಸಿಡಿಟಿ, ಗ್ಯಾಸ್, ಅಜೀರ್ಣ, ಹೊಟ್ಟೆನೋವಿನಂತಹ ಸಮಸ್ಯೆಗಳಿಂದ ದೂರ ಉಳಿಯಬಹುದು.

4 /6

ಜೀರಿಗೆಯು ಜೀರ್ಣಕ್ರಿಯೆಗೆ ಅತ್ಯುತ್ತಮ ಮಸಾಲೆ ಪದಾರ್ಥ ಎಂದು ನಿಮಗೆ ತಿಳಿದಿರಬಹುದು. ವರದಿಯೊಂದರ ಪ್ರಕಾರ, ಜೀರಿಗೆಯಲ್ಲಿ ಥೈಮೋಲ್ ಎಂಬ ಅಂಶವಿದ್ದು, ಇದು ಜೀರ್ಣಾಂಗ ವ್ಯವಸ್ಥೆಯ ಸರಿಯಾದ ಕಾರ್ಯನಿರ್ವಹಣೆಗೆ ಬಹಳ ಪ್ರಯೋಜನಕಾರಿ ಎಂದು ತಿಳಿದುಬಂದಿದೆ.

5 /6

ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಕೊತ್ತಂಬರಿ ಬೀಜ ಬಹಳ ಪ್ರಯೋಜನಕಾರಿ ಆಗಿದೆ. ಕೊತ್ತಂಬರಿ ಬೀಜದ ಬಳಕೆಯಿಂದ ಜೀರ್ಣಕ್ರಿಯೆಗೆ ಅಗತ್ಯವಾಗಿರುವ ಪಿತ್ತರಸ ಆಮ್ಲ ರೂಪುಗೊಳ್ಳುತ್ತದೆ.

6 /6

ಇಂಗು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಉದರ ಸಂಬಂಧಿತ ಹಲವು ಸಮಸ್ಯೆಗಳಿಂದಲೂ ಪರಿಹಾರ ನೀಡಬಲ್ಲಡು. ಇಂಗಿನ ಬಳಕೆಯಿಂದ ಸಣ್ಣ ಕರುಳಿನಲ್ಲಿ ಜೀರ್ಣಕಾರಿ ಕಿಣ್ವಗಳ ಚಟುವಟಿಕೆ ಹೆಚ್ಚಾಗಿ ಜೀರ್ಣಕ್ರಿಯೆ ಸುಧಾರಿಸುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.