OTT Movie Release: OTT ನಲ್ಲಿ ಬಿಡುಗಡೆಯಾಗಲಿವೆ ಈ ಮೂರು ಬ್ಲಾಕ್‌ಬಸ್ಟರ್ ಚಲನಚಿತ್ರಗಳು...!
ಸೌತ್ ಫಿಲ್ಮ್ ಇಂಡಸ್ಟ್ರಿ ಬಹಳ ಹಿಂದಿನಿಂದಲೂ ಉತ್ತಮ ಚಿತ್ರಗಳನ್ನು ನಿರ್ಮಿಸುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಸೌತ್ ಇಂಡಸ್ಟ್ರಿಯ ಮೂರು ಬಹುಚರ್ಚಿತ ಚಿತ್ರಗಳು ಈಗ OTT ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿವೆ. ಹೌದು, ಶೀಘ್ರದಲ್ಲೇ ಎಸ್‌ಎಸ್ ರಾಜಮೌಳಿ ಅವರ ಬ್ಲಾಕ್‌ಬಸ್ಟರ್ ಚಿತ್ರ 'ಆರ್‌ಆರ್‌ಆರ್', ವಿಜಯ್ ಅವರ 'ಬಿಸ್ಟ್ , ಚಿರಂಜೀವಿ ಮತ್ತು ರಾಮ್ ಚರಣ್ ಅವರ 'ಆಚಾರ್ಯ' ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಲಿವೆ.
ಅಜಯ್ ದೇವಗನ್, ಆಲಿಯಾ ಭಟ್, ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ಅಭಿನಯದ 'ಆರ್‌ಆರ್‌ಆರ್' ಮೊದಲ ವಾರದಲ್ಲಿ ಬಾಕ್ಸ್ ಆಫೀಸ್‌ನಲ್ಲಿ 767.54 ರೂ ಕೋಟಿ ಕಲೆಕ್ಷನ್ ಮಾಡಿದೆ. 'ಬಿಸ್ಟ್ ' 8.6 ಕೋಟಿ ಹಾಗೂ 'ಆಚಾರ್ಯ' 54.74 ಕೋಟಿ ಗಳಿಸಿದೆ.
ವಿಜಯ್ ಮತ್ತು ಪೂಜಾ ಹೆಗ್ಡೆ ಅಭಿನಯದ ತಮಿಳು ಚಿತ್ರ 'ಬೀಸ್ಟ್' ಈಗ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಕೇವಲ ಒಂದು ತಿಂಗಳ ನಂತರ OTT ನಲ್ಲಿ ಬಿಡುಗಡೆಯಾಗಲಿದೆ. ನೆಟ್‌ಫ್ಲಿಕ್ಸ್ ಇಂಡಿಯಾ ಮೇ 4 ರಂದು ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಬೀಸ್ಟ್ ಮೇ 11 ರಂದು ಐದು ಭಾಷೆಗಳಲ್ಲಿ ಪ್ರೀಮಿಯರ್ ಆಗಲಿದೆ ಎಂದು ತಿಳಿಸಿದೆ. ನೆಟ್‌ಫ್ಲಿಕ್ಸ್, 'ದಿ ಬೀಸ್ಟ್ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಮೇ 11 ರಂದು ನೆಟ್‌ಫ್ಲಿಕ್ಸ್‌ಗೆ ಬರಲಿದೆ' ಎಂದು ಹೇಳಿದೆ.
ಇತ್ತೀಚೆಗಷ್ಟೇ ಬಿಡುಗಡೆಯಾದ 'ಆಚಾರ್ಯ' ಚಿತ್ರ ಕೂಡ ಚಿತ್ರ ತೆರೆ ಮೇಲೆ ಸದ್ದು ಮಾಡಿದ ನಂತರ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮ್ ಆಗಲು ಸಿದ್ಧವಾಗಿದೆ. ರಾಮ್ ಚರಣ್ ಮತ್ತು ಚಿರಂಜೀವಿ ಅಭಿನಯದ 'ಆಚಾರ್ಯ' ಚಿತ್ರವು ಮೇ 27, 2022 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಲಿದೆ ಎಂದು ಇತ್ತೀಚಿನ ಮಾಧ್ಯಮ ವರದಿಗಳಲ್ಲಿ ಹೇಳಲಾಗುತ್ತಿದೆ.
ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಎಂದು ಸಾಬೀತುಪಡಿಸಿದ ನಂತರ, ಈಗ 'ಆರ್‌ಆರ್‌ಆರ್' ಕೂಡ ಒಟಿಟಿಯಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಅವರ ಚಿತ್ರವು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ Zee5 ನಲ್ಲಿ ಬಿಡುಗಡೆಯಾಗಲಿದೆ.