Diabetes Diet: ಬೇಸಿಗೆಯಲ್ಲಿ ಬ್ಲಡ್ ಶುಗರ್ ನಿಯಂತ್ರಣಕ್ಕೆ ತಿನ್ನಲೇಬೇಕಾದ ಆಹಾರಗಳಿವು
ಡಯಾಬಿಟಿಸ್ ಸಮಸ್ಯೆ ಇರುವವರು ತಮ್ಮ ಆಹಾರದ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕು. ಇಲ್ಲದಿದ್ದರೆ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಿ ಆರೋಗ್ಯ ಬಿಗಡಾಯಿಸಬಹುದು. ಆರೋಗ್ಯ ತಜ್ಞರ ಪ್ರಕಾರ, ಬೇಸಿಗೆಯಲ್ಲಿ ಕೆಲವು ತರಕಾರಿಗಳ ಸೇವನೆಯು ಬ್ಲಡ್ ಶುಗರ್ ನಿಯಂತ್ರಣಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ. ಅಂತಹ ತರಕಾರಿಗಳೆಂದರೆ...
ಆರೋಗ್ಯ ತಜ್ಞರ ಪ್ರಕಾರ, ಬೇಸಿಗೆಯಲ್ಲಿ ಸೌತೆಕಾಯಿ ಸೇವನೆಯು ಮಧುಮೇಹಿಗಳಿಗೆ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ತುಂಬಾ ಪ್ರಯೋಜನಕಾರಿ ಆಗಿದೆ.
ಫೈಬರ್, ಜೀವಸತ್ವಗಳು, ಖನಿಜಗಳು ಮತ್ತು ಇತರ ಅನೇಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಬ್ರೋಕೋಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಕಾರಿ ಆಗಿದೆ.
ಮಧುಮೇಹಿಗಳಿಗೆ ಪರಂಗಿಕಾಯಿ ಸೇವನೆಯಿಂದ ಬ್ಲಡ್ ಶುಗರ್ ನಿಯಂತ್ರಣದಲ್ಲಿರುತ್ತದೆ.
ಚಿಯಾ ಬೀಜಗಳು ಫೈಬರ್, ಒಮೆಗಾ 3, ಕೊಬ್ಬಿನಾಮ್ಲಗಳು, ಆಂಟಿ-ಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ಇದ್ರ ಬಳಕೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಾತ್ರವಲ್ಲ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ.
ಪಾಲಕ್ ಸೊಪ್ಪಿನ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಇರುವುದರಿಂದ ಮಧುಮೇಹಿಗಳಿಗೆ ಇದನ್ನು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.