ಎಷ್ಟೇ ಇಷ್ಟ ಇದ್ದರೂ ಸಹ... ಈ ಆರೋಗ್ಯ ಸಮಸ್ಯೆ ಇದ್ದವರು ಸೀತಾಫಲ ಹಣ್ಣು ತಿನ್ನಲೇಬಾರದು!

Fri, 13 Sep 2024-7:01 pm,

ಸೀತಾಫಲ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ ಕೆಲವರಿಗೆ ಹಾನಿಕಾರಕವೂ ಹೌದು. ಸೀತಾಫಲವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.

 

ಸೀತಾಫಲ ಮಿತಿಮೀರಿ ತಿನ್ನುವುದರಿಂದ ಅನೇಕರಿಗೆ ಅಲರ್ಜಿ ಉಂಟಾಗಬಹುದು. ಈ ಕಾರಣದಿಂದಾಗಿ, ತುರಿಕೆ ಮತ್ತು ಚರ್ಮದ ದದ್ದುಗಳ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

 

ಇದಷ್ಟೇ ಅಲ್ಲ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ, ಸೀತಾಫಲವನ್ನು ತಿನ್ನಬಾರದು. ಸೀತಾಫಲದಲ್ಲಿ ಫೈಬರ್ ಸಮೃದ್ಧವಾಗಿದ್ದರೂ ಸಹ ಕೆಲವೊಮ್ಮೆ ಇದನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆನೋವು, ಅತಿಸಾರ ಮತ್ತು ಗ್ಯಾಸ್ ಸಮಸ್ಯೆಗಳು ಉಂಟಾಗಬಹುದು.

 

ಸೀತಾಫಲವು ಹೆಚ್ಚಿನ ಪ್ರಮಾಣದ ಕಬ್ಬಿಣವನ್ನು ಹೊಂದಿರುತ್ತದೆ. ಇದೇ ಕಾರಣಕ್ಕೆ ಸೀತಾಫಲವನ್ನು ಅತಿಯಾದ ಪ್ರಮಾಣದಲ್ಲಿ ಸೇವಿಸಬಾರದು ಎನ್ನುವುದು. ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ವಾಂತಿ, ವಾಕರಿಕೆ ಮುಂತಾದ ಸಮಸ್ಯೆಗಳು ಉಂಟಾಗಬಹುದು.

 

ಕಡಿಮೆ ರಕ್ತದೊತ್ತಡದ ಸಮಸ್ಯೆ ಇದ್ದರೆ ಸೀತಾಫಲವನ್ನು ತಿನ್ನಬೇಡಿ ಅಥವಾ ಸೀಮಿತ ಪ್ರಮಾಣದಲ್ಲಿ ಮಾತ್ರ ತಿನ್ನಿ. ಇದು ರಕ್ತದೊತ್ತಡವು ಹಠಾತ್ತನೆ ಹೆಚ್ಚು ಮಾಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ, ತಲೆತಿರುಗುವಿಕೆ, ಮೂರ್ಛೆ ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳು ಉಂಟಾಗಬಹುದು.

 

ಸೀತಾಫಲವು ಕ್ಯಾಲೋರಿಗಳಲ್ಲಿ ಸಮೃದ್ಧವಾಗಿದ್ದು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಇದನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನಬೇಡಿ. ತಿಂದರೆ ತೂಕ ಹೆಚ್ಚಿಸಬಹುದು.

 

ಇನ್ನು ಇದು ಕೆಲವರ ಆರೋಗ್ಯಕೆ ಪ್ರಯೋಜನಕಾರಿಯೂ ಹೌದು. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಸೀತಾಫಲವು ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ʼಗಳನ್ನು ಹೊಂದಿದೆ. ತಜ್ಞರ ಪ್ರಕಾರ, ಇದು ಕ್ಯಾನ್ಸರ್‌ʼನಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.

 

ಸೀತಾಫಲದಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್ ಇರುವ ಕಾರಣ, ಇದನ್ನು ತಿನ್ನುವುದು ಗರ್ಭಿಣಿಯರಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

 

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link