ಹೈ ಬಿಪಿ ಇರುವವರು ಈ ಆಹಾರಗಳಿಂದ ದೂರವಿರಿ..!
Foods To Avoid With High BP: ಹೈ ಬಿಪಿ ಲೈಟ್ ಆಗಿ ತೆಗೆದುಕೊಳ್ಳುವಷ್ಟು ಸಣ್ಣ ಸಮಸ್ಯೆಯಲ್ಲ. ಏಕೆಂದರೆ ಈ ರೋಗವು ನಮ್ಮ ಜೀವಕ್ಕೆ ಅಪಾಯವನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ಈ ಸಮಸ್ಯೆ ಇರುವವರು ತಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಲು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.
ಆಲೂಗಡ್ಡೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡ ಇರುವ ರೋಗಿಗಳು ಆಲುಗಡ್ಡೆಯನ್ನು ಸೇವಿಸಬಾರದು. ಏಕೆಂದರೆ ಆಲೂಗಡ್ಡೆಯಲ್ಲಿ ಸೋಡಿಯಂ ಅಂಶ ಹೆಚ್ಚಾಗಿರುವ ಕಾರಣ ಇದು ರಕ್ತದೊದ್ದಡವನ್ನು ಹೆಚ್ಚಿಸುತ್ತದೆ.
ಬಿಳಿ ಅಕ್ಕಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದೊತ್ತಡವೂ ಹೆಚ್ಚುತ್ತದೆ. ಬಿಳಿ ಅನ್ನವನ್ನು ನಿಯಮಿತವಾಗಿ ತಿನ್ನುವುದರಿಂದ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು.
ಸಕ್ಕರೆಯನ್ನು ವಿವಿಧ ಆಹಾರಗಳಲ್ಲಿ ಬಳಸಲಾಗುತ್ತದೆ. ಹೆಚ್ಚು ಸಕ್ಕರೆಯನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ ಇದರಿಂದ ಬಿಪಿ ಕೂಡ ಹೆಚ್ಚುತ್ತದೆ.
ಜನರು ಬಿಳಿ ಬ್ರೆಡ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಬಿಳಿ ಬ್ರೆಡ್ ಕಾರ್ಬೋಹೈಡ್ರೇಟ್‌ಗಳ ಜೊತೆಗೆ ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬಹಳ ವೇಗವಾಗಿ ಹೆಚ್ಚಿಸುತ್ತದೆ. ಈ ಮೂಲಕ ಇದು ರಕ್ತದೊತ್ತಡವನ್ನೂ ಹೆಚ್ಚು ಮಾಡುತ್ತದೆ.