1 ಶತಕಕ್ಕೆ 7 ವಿಶ್ವದಾಖಲೆಗಳು ಉಡೀಸ್..! ‘ಕಿಂಗ್’ ಕೊಹ್ಲಿ ಬತ್ತಳಿಕೆ ಸೇರಿದ ಸಚಿನ್, ಜಾಕ್ವೆಸ್ ಕಾಲಿಸ್’ರ ಈ ದಾಖಲೆ
ವಿರಾಟ್ ಕೊಹ್ಲಿ ತಮ್ಮ 29 ನೇ ಟೆಸ್ಟ್ ಶತಕ ಇತ್ತೀಚೆಗೆ ಬಾರಿಸಿದ್ದರು. ಅಷ್ಟೇ ಅಲ್ಲದೆ, ಕ್ರಿಕೆಟ್ ಲೋಕದ ಅನೇಕರ ದಿಗ್ಗಜರ ರೆಕಾರ್ಡ್’ಗಳು ಧೂಳಿಪಟವಾಗಿದೆ. ವಿರಾಟ್ ಕೊಹ್ಲಿ ಸಮಕಾಲೀನ ಕ್ರಿಕೆಟ್ ಪ್ರತಿಭೆ. ಗಮನಾರ್ಹವಾದ ವೃತ್ತಿಜೀವನದ ಮೂಲಕ ಕ್ರೀಡಾ ಇತಿಹಾಸದಲ್ಲಿ ದೃಢವಾಗಿ ನೆಲೆಸಿರುವಂತವರು ಎಂದರೆ ತಪ್ಪಾಗಲ್ಲ.
ನಂ.4 ಸ್ಥಾನದಲ್ಲಿ ಬ್ಯಾಟ್ ಬೀಸುವ ವಿರಾಟ್ ಕೊಹ್ಲಿಯ ಪ್ರಾವೀಣ್ಯತೆ ಅಪ್ರತಿಮವಾದದ್ದು. ದಿಗ್ಗಜ ಸಚಿನ್ ತೆಂಡೂಲ್ಕರ್, ಜಾಕ್ವೆಸ್ ಕಾಲಿಸ್ ಮತ್ತು ಮಹೇಲ ಜಯವರ್ಧನೆ ಸೇರಿದಂತೆ ಅನೇಕ ಕ್ರಿಕೆಟಿಗರ ದಾಖಲೆಗಳನ್ನು ಸರಿಗಟ್ಟಿದ್ದಾರೆ.
ಕೊಹ್ಲಿ ತಮ್ಮ 29 ನೇ ಟೆಸ್ಟ್ ಶತಕದೊಂದಿಗೆ, ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಅತಿ ಹೆಚ್ಚು ಅಂತರಾಷ್ಟ್ರೀಯ ಶತಕಗಳ ಬಾರಿಸಿದ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಸಾಧನೆಯನ್ನು ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಮಾಂತ್ರಿಕ ಜಾಕ್ವೆಸ್ ಕಾಲಿಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರೊಂದಿಗಿನ ಪಾರ್ಟನರ್’ಶಿಪ್ ಸರಾಸರಿ 66.73 ಇದ್ದು 1000 ಕ್ಕೂ ಹೆಚ್ಚು ಪಾಲುದಾರಿಕೆ ರನ್‌ಗಳನ್ನು ಒಟ್ಟುಗೂಡಿಸಿದ ಭಾರತೀಯ ಜೋಡಿಗಳಾಗಿದ್ದಾರೆ.
ಮತ್ತೊಂದೆಡೆ ಭಾರತದ ಅತ್ಯಂತ ಯಶಸ್ವಿ ಸಾಗರೋತ್ತರ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ವಿರಾಟ್ ಪಾತ್ರರಾಗಿದ್ದಾರೆ. ಈ ಹಿಂದೆ 29 ಶತಕ ಸಿಡಿಸಿದ ಸಚಿನ್ ತೆಂಡೂಲ್ಕರ್ ಅಗ್ರ ಸ್ಥಾನದಲ್ಲಿದ್ದರೆ, 28 ಟೆಸ್ಟ್ ಶತಕಗಳ ಮೂಲಕ ವಿರಾಟ್ ಎರಡನೇ ಸ್ಥಾನದಲ್ಲಿದ್ದರು. ಆದರೆ ಇದೀಗ ವಿದೇಶದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯರ ಪಟ್ಟಿಯಲ್ಲಿ ಇಬ್ಬರೂ ಅಗ್ರ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಇನ್ನು ಕೇವಲ 559 ಇನ್ನಿಂಗ್ಸ್‌ಗಳಲ್ಲಿ ವಿರಾಟ್ 76 ಅಂತರಾಷ್ಟ್ರೀಯ ಶತಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಒಬ್ಬರು ಎಂಬ ಖ್ಯಾತಿಯನ್ನು ಗಳಿಸಿದ್ದಾರೆ. ಎಲ್ಲಾ ಸ್ವರೂಪಗಳಲ್ಲಿ 76 ಶತಕಗಳೊಂದಿಗೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.