Century in 100th test: 100ನೇ ಟೆಸ್ಟ್‌ ಪಂದ್ಯದಲ್ಲಿ ಶತಕ ಬಾರಿಸಿದ ಟಾಪ್‌ ಬ್ಯಾಟ್ಸ್‌ಮನ್‌ಗಳು

Century in 100th test match: ತಮ್ಮ 100ನೇ ಟೆಸ್ಟ್‌ ಪಂದ್ಯದಲ್ಲಿ ಶತಕ ಸಾಧನೆ ಮಾಡಿದ ಆಟಗಾರ ಇಂಗ್ಲೆಂಡ್‌ನ ಕಾಲಿನ್‌ ಕೌಡ್ರೆ. ಈತ 1968ರಲ್ಲಿ ಈ ವಿಶೇಷ ಸಾಧನೆ ಮಾಡಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರನಾದ.

Century in 100th test: ಟೆಸ್ಟ್‌ ಕ್ರಿಕೆಟ್‌ನಲ್ಲಿ ಅನೇಕ ಸ್ಟಾರ್‌ ಆಟಗಾರರು ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಾಕಷ್ಟು ಶತಕಗಳ ಸಾಧನೆ ಇದ್ದರೂ, ಕೆಲವೇ ಕೆಲವು ಬ್ಯಾಟ್ಸ್‌ಮನ್‌ಗಳು ತಮ್ಮ 100ನೇ ಟೆಸ್ಟ್‌ ಪಂದ್ಯದಲ್ಲಿ ಶತಕ ಗಳಿಸಲು ಸಮರ್ಥರಾಗಿದ್ದಾರೆ. ಈ ಸ್ಟೋರಿಯಲ್ಲಿ ನಾವು ನಿಮಗೆ ತಮ್ಮ 100ನೇ ಟೆಸ್ಟ್‌ ಪಂದ್ಯದಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ ಟಾಪ್‌ ಬ್ಯಾಟ್ಸ್‌ಮನ್‌ಗಳ ಬಗ್ಗೆ ತಿಳಿಸಿಕೊಡಲಿದ್ದೇವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ತಮ್ಮ 100ನೇ ಟೆಸ್ಟ್‌ ಪಂದ್ಯದಲ್ಲಿ ಶತಕ ಸಾಧನೆ ಮಾಡಿದ ಆಟಗಾರ ಇಂಗ್ಲೆಂಡ್‌ನ ಕಾಲಿನ್‌ ಕೌಡ್ರೆ. ಈತ 1968ರಲ್ಲಿ ಈ ವಿಶೇಷ ಸಾಧನೆ ಮಾಡಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರನಾದ. ಆಸ್ಟ್ರೇಲಿಯಾ ವಿರುದ್ಧದ ತಮ್ಮ 100ನೇ ಟೆಸ್ಟ್‌ ಪಂದ್ಯದಲ್ಲಿ ಕಾಲಿನ್‌ 104 ರನ್‌ ಗಳಿಸಿ ಶತಕ ಸಿಡಿಸಿ ಮಿಂಚಿದ್ದರು.

2 /6

1989ರಲ್ಲಿ ಪಾಕಿಸ್ತಾನದ ದಂತಕಥೆ, ಸ್ಟಾರ್‌ ಬ್ಯಾಟ್ಸ್‌ಮನ್‌ ಖ್ಯಾತಿಯ ಜಾವೇದ್‌ ಮಿಯಾಂದಾದ್‌ ಭಾರತದ ವಿರುದ್ಧ ತಮ್ಮ 100ನೇ ಟೆಸ್ಟ್‌ ಪಂದ್ಯ ಆಡುವಾಗ ಈ ವಿಶೇಷ ಸಾಧನೆ ಮಾಡಿದ್ದರು. ಅಂದು ಮಿಯಾಂದಾದ್‌ ಭಾರತದ ವಿರುದ್ಧ 145 ರನ್‌ ಗಳಿಸಿ ಈ ಸಾಧನೆ ಮಾಡಿದ್ದರು. 

3 /6

1990ರಲ್ಲಿ ವೆಸ್ಟ್‌ ಇಂಡೀಸ್‌ನ ಗಾರ್ಡನ್‌ ಗ್ರೀನಿಡ್ಜ್‌ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ತಮ್ಮ 100ನೇ ಟೆಸ್ಟ್‌ ಪಂದ್ಯದಲ್ಲಿ ಅವರು 149 ರನ್‌ ಗಳಿಸಿ ಅದ್ಭುತ ಇನ್ನಿಂಗ್ಸ್‌ ಆಡಿದ್ದರು. 

4 /6

ಇಂಗ್ಲೆಂಡ್‌ನ ಅಲೆಕ್‌ ಸ್ಟೀವರ್ಟ್‌ ಅವರು 2000ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿ ಈ ಸಾಧನೆ ಮಾಡಿದ್ದರು. ತಮ್ಮ 100ನೇ ಟೆಸ್ಟ್‌ ಪಂದ್ಯದಲ್ಲಿ ಅವರು 105 ರನ್‌ ಗಳಿಸಿ ಶತಕ ಸಿಡಿಸಿದ್ದರು.

5 /6

ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ಪಾಕ್‌ ತಂಡದ ಮಾಜಿ ಕ್ಯಾಪ್ಟನ್‌ ಇಂಜಮಾಮ್‌ ಉಲ್‌ ಹಕ್‌ 5ನೇ ಸ್ಥಾನದಲ್ಲಿದ್ದಾರೆ. 2005ರಲ್ಲಿ ಭಾರತದ ವಿರುದ್ಧ ತಮ್ಮ 100ನೇ ಟೆಸ್ಟ್‌ ಪಂದ್ಯದಲ್ಲಿ ಅವರು 184 ರನ್‌ಗಳ ಅಮೋಘ ಶತಕ ಸಿಡಿಸಿದ್ದರು.

6 /6

ಹಾಲಿ ಇಂಗ್ಲೆಂಡ್‌ ಕ್ರಿಕೆಟಿಗ ಜೋರೂಟ್‌ ಕೂಡ ಈ ಸಾಧನೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ಮುಕ್ತಾಯಗೊಂಡ ಶ್ರೀಲಂಕಾದ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಲ್ಲಿ ರೂಟ್‌ 143 ರನ್‌ ಗಳಿಸುವ ಮೂಲಕ ಈ ಸಾಧನೆ ಮಾಡಿದರು.