ಡಿಸೆಂಬರ್ ತಿಂಗಳಿನಲ್ಲಿ ಗುರು-ಸೂರ್ಯ ಸೇರಿದಂತೆ ಐದು ಗ್ರಹಗಳ ನಡೆ ಬದಲಾವಣೆ, ಧನ ಕುಬೇರ ಕೃಪೆಯಿಂದ ಈ ಜನರಿಗೆ ಅಪಾರ ಸಿರಿಸಂಪತ್ತು ಪ್ರಾಪ್ತಿ ಯೋಗ!
Trigrahi Yog In December 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ ತಿಂಗಳಿನಲ್ಲಿ ಸೂರ್ಯ, ಮಂಗಳ, ಬುಧ ಸೇರಿದಂತೆ ಒಟ್ಟು 5 ಗ್ರಹಗಳು ತನ್ನ ರಾಶಿಯನ್ನು ಪರಿವರ್ತಿಸಲಿದ್ದು, ಸೂರ್ಯ, ಮಂಗಳ ಹಾಗೂ ಬುಧಗಳ ಕೃಪೆಯಿಂದ ಧನು ರಾಶಿಯಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಸಿರಿಸಂಪತ್ತು ಭಾಗ್ಯ ಒದಗಿ ಬರಲಿದೆ. (Spiritual News In Kannada)
ವೃಷಭ ರಾಶಿ: ಡಿಸೆಂಬರ್ ತಿಂಗಳು ನಿಮ್ಮ ಪಾಲಿಗೆ ಶುಭ ಸಾಬೀತಾಗಲಿದೆ. ಈ ತಿಂಗಳಿನಲ್ಲಿ ನಿಮಗೆ ಆಸ್ತಿಪಾಸ್ತಿ-ವಾಹನ ಸುಖ ಪ್ರಾಪ್ತಿಯಾಗುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ನೌಕರಿ ವ್ಯಾಪಾರದಲ್ಲಿ ನೀವು ಮಾಡುವ ಪ್ರಯತ್ನಗಳಿಗೆ ಅದೃಷ್ಟದ ಬೆಂಬಲ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಅಡೆಸುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಈ ರಾಶಿಯ ಜಾತಕದವರಿಗೆ ಎಲ್ಲಾ ಕಾರ್ಯಗಳಲ್ಲಿ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ. ಕುಟುಂಬದ ಬೆಂಬಲ ನಿಮಗೆ ಸಿಗಲಿದ್ದು, ಮನಸ್ಸು ಪ್ರಸನ್ನವಾಗಿರಲಿದೆ.
ತುಲಾ ರಾಶಿ: ಈ ತಿಂಗಳು ತುಲಾ ಜಾತಕದವರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ನಿಮಗೆ ಬರಬೇಕಾದ ಹಣ ನಿಮ್ಮ ಕೈಸೇರಲಿದೆ. ವ್ಯಾಪಾರದಲ್ಲಿ ಮನಸ್ಸಿಗೆ ತಕ್ಕಂತೆ ಯಶಸ್ಸು ಸಿಗಲಿದೆ. ಅವಿವಾಹಿತರ ವಿವಾಹ ನಿಶ್ಚಯವಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಮಾತಿನಲ್ಲಿ ಪ್ರಭಾವ ಕಾಣಲು ಸಿಗಲಿದೆ. ಜನರು ನಿಮ್ಮ ಮಾತಿಗೆ ಆಕರ್ಷಿತರಾಗಲಿದ್ದಾರೆ. ನೌಕರ ವರ್ಗದ ಜನರ ಕಾರ್ಯಶೈಲಿಯಲ್ಲಿ ಹೊಸ ಮೆರಗು ಕಾಣಲು ಸಿಗಲಿದೆ. ಇದರಲ್ಲಿ ನಿಮಗೆ ಹಿರಿಯ ಮತ್ತು ಕಿರಿಯ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ.
ಧನು ರಾಶಿ: ಡಿಸೆಂಬರ್ ತಿಂಗಳಿನಲ್ಲಿ ನೀವು ಭೂಮಿ ಅಥವಾ ವಾಹನ ಖರೀದಿಗೆ ಮನಸ್ಸು ಮಾಡುವ ಸಾಧ್ಯತೆ ಇದೆ, ಈ ನಿಟ್ಟಿನಲ್ಲಿ ನೀವು ಮಾಡುವ ಹೂಡಿಕೆ ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಇದರೊಂದಿಗೆ ರುಚಕ ಹಾಗೂ ಮಾಲವ್ಯ ರಾಜಯೋಗ ನಿರ್ಮಾಣದಿಂದ ನಿಮಗೆ ಲಾಭ ಸಿಗಲಿದೆ. ವ್ಯಾಪಾರದಲ್ಲಿ ದೊಡ್ಡ ಒಪ್ಪಂದ ಫೈನಲ್ ಆಗುವ ಸಾಧ್ಯತೆ ಇದ್ದು, ಅದು ಭವಿಷ್ಯದ ದೃಷ್ಟಿಯಿಂದ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಗಲಿದೆ. ಹೊಸ ಕೆಲಸ ಆರಂಭಿಸಲು ಇದು ಉತ್ತಮ ಸಮಯವಾಗಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)