Trigrahi Yoga in Pisces: ಸೂರ್ಯ, ಬುಧ ಮತ್ತು ರಾಹುವಿನ ಸಂಯೋಗದಿಂದ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತದೆ. ಕೆಲವು ರಾಶಿಗಳ ಜನರು ಈ ತ್ರಿಗ್ರಾಹಿ ಯೋಗದಿಂದ ಬಹಳಷ್ಟು ಪ್ರಯೋಜನ ಪಡೆಯುತ್ತಾರೆ.
Trigrahi Yoga 2025: ನವಗ್ರಹಗಳ ಸ್ಥಾನ ಜಾತಕದಲ್ಲಿ ಅತ್ಯುತ್ತಮವಾಗಿದ್ದರೆ ಯಾವುದೇ ವ್ಯಕ್ತಿ ಜೀವನದಲ್ಲಿ ಕೆಳಗೆ ಬೀಳಲು ಸಾಧ್ಯವೇ ಇಲ್ಲ. ಆತನ ಏಳಿಗೆಯನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಗ್ರಹಗಳ ಸ್ಥಾನ ಉತ್ತಮವಾಗಿಲ್ಲವಾದಲ್ಲಿ ಪಾತಾಳಕ್ಕೆ ಬೀಳುವುದು ಖಚಿತ. ಹೀಗಾಗಿ ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ರಾಶಿಗಳಲ್ಲಿನ ಬದಲಾವಣೆ ಬಹಳ ಮುಖ್ಯವಾಗಿದೆ. ಗ್ರಹಗಳು ಸಂಚಾರ ಮಾಡುವಾಗ ಅದರ ಶುಭ ಅಥವಾ ಅಶುಭ ಪರಿಣಾಮ ಎಲ್ಲಾ ರಾಶಿಗಳ ಜನರ ಮೇಲೂ ಅವರ ಜಾತಕದಲ್ಲಿನ ಗ್ರಹಗಳ ಸ್ಥಾನಕ್ಕೆ ಅನುಗುಣವಾಗಿ ಕಂಡುಬರುತ್ತದೆ. ಎಲ್ಲಾ ಗ್ರಹಗಳು ತಮ್ಮ ರಾಶಿಗಳನ್ನು ಒಂದು ನಿರ್ದಿಷ್ಟ ಮಧ್ಯಂತರದಲ್ಲಿ ಬದಲಾಯಿಸುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಒಂದು ರಾಶಿಯಲ್ಲಿ ಒಂದಕ್ಕಿಂತ ಹೆಚ್ಚು ಗ್ರಹಗಳು ಸಂಚಾರ ಮಾಡಿದಾಗ ಶುಭ ಹಾಗೂ ಆಶುಭ ಯೋಗಗಳು ರೂಪಗೊಳ್ಳುತ್ತವೆ. ಕೆಲವು ದಿನಗಳ ನಂತರ ರಾಹು, ಬುಧ & ಸೂರ್ಯ ಈ ಮೂರು ಗ್ರಹಗಳು ಮೀನ ರಾಶಿಯಲ್ಲಿ ಸಾಗುತ್ತವೆ. ರಾಹು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗಲು ಸುಮಾರು 18 ತಿಂಗಳು ತೆಗೆದುಕೊಳ್ಳುತ್ತದೆ. ರಾಹು ಪ್ರಸ್ತುತ ಮೀನ ರಾಶಿಯಲ್ಲಿದ್ದಾನೆ, ಬುಧ ಫೆಬ್ರವರಿ 27ರಂದು ಮೀನ ರಾಶಿಗೆ ಪ್ರವೇಶಿಸುತ್ತಾನೆ & ಸೂರ್ಯದೇವರು ಮಾರ್ಚ್ 14ರಂದು ಮೀನ ರಾಶಿಗೆ ಪ್ರವೇಶಿಸುತ್ತಾನೆ. ಈ ರೀತಿ ಸೂರ್ಯ, ಬುಧ ಮತ್ತು ರಾಹುವಿನ ಸಂಯೋಗದಿಂದ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತದೆ. ಕೆಲವು ರಾಶಿಗಳ ಜನರು ಈ ತ್ರಿಗ್ರಾಹಿ ಯೋಗದಿಂದ ಬಹಳಷ್ಟು ಪ್ರಯೋಜನ ಪಡೆಯುತ್ತಾರೆ. ಹಾಗಾದ್ರೆ ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯಿರಿ...
ತ್ರಿಗ್ರಾಹಿ ಯೋಗವು ಮಿಥುನ ರಾಶಿಯ ಜನರಿಗೆ ತುಂಬಾ ಒಳ್ಳೆಯದು. ಈ ಸಮಯದಲ್ಲಿ ನಿಮಗೆ ಆರ್ಥಿಕ ಲಾಭದ ಅವಕಾಶ ಹೆಚ್ಚಾಗಲಿವೆ. ನೀವು ಮಾಡುವ ಪ್ರತಿಯೊಂದು ಕೆಲಸದಲ್ಲೂ ನಿಮಗೆ ಉತ್ತಮ ಯಶಸ್ಸು ಸಿಗುತ್ತದೆ. ಈ ತ್ರಿಗ್ರಾಹಿ ಯೋಗವು ಮಿಥುನ ರಾಶಿಯ ಹತ್ತನೇ ಮನೆಯಲ್ಲಿ ಸಂಭವಿಸುತ್ತದೆ. ನಿಮ್ಮ ಕೆಲಸದ ಮೂಲಕ ನೀವು ಬಹಳಷ್ಟು ಸಂಪತ್ತನ್ನು ಗಳಿಸುವಲ್ಲಿ ಯಶಸ್ವಿಯಾಗುತ್ತೀರಿ. ಉದ್ಯೋಗ ಹುಡುಕುತ್ತಿರುವವರಿಗೆ ಹಲವು ಅವಕಾಶಗಳು ಸಿಗಬಹುದು. ವ್ಯಾಪಾರಿಗಳಿಗೆ ಉತ್ತಮ ಲಾಭ ಗಳಿಸಲು ಉತ್ತಮ ಅವಕಾಶವಿದೆ.
ಸಿಂಹ ರಾಶಿಯ ಜನರಿಗೆ ಮೀನ ರಾಶಿಯಲ್ಲಿನ ತ್ರಿಗ್ರಾಹಿ ಯೋಗ ತುಂಬಾ ಶುಭವಾಗಲಿದೆ. ಈ ಯೋಗ ನಿಮ್ಮ ರಾಶಿಯ ಎಂಟನೇ ಮನೆಯಲ್ಲಿ ರೂಪುಗೊಳ್ಳುತ್ತದೆ. ಸಿಂಹ ರಾಶಿಯ ಜನರಿಗೆ ಹಠಾತ್ ಆರ್ಥಿಕ ಲಾಭದ ಅವಕಾಶಗಳು ಹೆಚ್ಚಾಗುತ್ತವೆ. ಈ ರಾಶಿಯ ಜನರು ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯುತ್ತಾರೆ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯಲಿದೆ. ನಿಮ್ಮ ಕೆಲಸದಲ್ಲಿ ನೀವು ಕೆಲವು ದೊಡ್ಡ ಲಾಭ ಪಡೆಯುವಿರಿ. ಸಮಾಜದಲ್ಲಿ ನಿಮಗೆ ವಿಶೇಷ ಗೌರವ ಸಿಗಲಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಮೀನ ರಾಶಿಯವರಿಗೆ ಈ ತ್ರಿಗ್ರಾಹಿ ಯೋಗ ಲಗ್ನ ಮನೆಯಲ್ಲಿ ಸಂಭವಿಸುತ್ತದೆ. ಈ ರಾಶಿಯ ಜನರು ಆತ್ಮವಿಶ್ವಾಸದಿಂದ ಇರುತ್ತಾರೆ. ನಿಮ್ಮ ಲಾಭದ ಅವಕಾಶಗಳು ಹೆಚ್ಚಾಗಲಿವೆ. ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಉದ್ಯೋಗದಲ್ಲಿ ಬಡ್ತಿ ಮತ್ತು ಸಂಬಳ ಹೆಚ್ಚಳದ ಸಾಧ್ಯತೆಗಳಿವೆ. ಜೀವನದಲ್ಲಿ ನಿಮಗೆ ಅಪಾರ ಸೌಕರ್ಯಗಳು ಸಿಗಲಿದ್ದು, ಐಷಾರಾಮಿ ಜೀವನ ನಡೆಸುವ ಅವಕಾಶ ಸಿಗಲಿದೆ.
(ಗಮನಿಸಿರಿ: ಈ ಮಾಹಿತಿಯನ್ನು ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಅಥವಾ ಧಾರ್ಮಿಕ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿದೆ. Zee Kannada News ಇದನ್ನು ದೃಢಪಡಿಸುವುದಿಲ್ಲ.)