Cholesterol: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ನಿರ್ಮೂಲನೆಗೆ ಇಲ್ಲಿವೆ ಕೆಲ ಸೂಪರ್ ಡ್ರಿಂಕ್ ಗಳು!
ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಸಾಮಾನ್ಯವಾಗಿ ಎಣ್ಣೆಯುಕ್ತ ಫಾಸ್ಟ್ ಫುಡ್ ಹಾಗೂ ಜಂಕ್ ಫುಡ್ ಸೇವನೆ ಮಾಡಬಾರದು. ಅವುಗಳ ಬದಲಿಗೆ ಫೈಬರ್ ಯುಕ್ತ ಆಹಾರ ಸೇವಿಸಬೇಕು. ಇಂದು ನಾವು ನಿಮಗೆ ಕೆಲ ಸೂಪರ್ ಡ್ರಿಂಕ್ಸ್ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅವುಗಳ ಸೇವನೆಯಿಂದ ನೀವು ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಗ್ರೀನ್ ಟೀ ಕ್ಯಾಟೆಚಿನ್ ಮತ್ತು ಎಪಿಗಲ್ಲೊಕಾಟೆಚಿನ್ ಗ್ಯಾಲೇಟ್ ಅನ್ನು ಹೊಂದಿರುತ್ತದೆ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಇದನ್ನು ದಿನಕ್ಕೆರಡು ಬಾರಿ ಸೇವಿಸಬೇಕು.ಇದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆಯಾಗುತ್ತದೆ.
ಬೆಳಗಿನ ಉಪಾಹಾರದಲ್ಲಿ ಓಟ್ಸ್ ಮಿಲ್ಕ್ ಅನ್ನು ಸೇವಿಸಿ, ಇದು ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಬೀಟಾ-ಗ್ಲುಕನ್ ಅಂಶವು ಪಿತ್ತರಸದ ಉಪ್ಪಿನೊಂದಿಗೆ ಸೇರಿಕೊಂಡು ಕರುಳಿನಲ್ಲಿ ಜೆಲ್ ತರಹದ ಪದರವನ್ನು ರೂಪಿಸುತ್ತದೆ, ಇದು ಕೊಲೆಸ್ಟ್ರಾಲ್ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.
ಬೇಸಿಗೆಯಲ್ಲಿ ಟೊಮ್ಯಾಟೊ ತಿನ್ನುವುದು ಒಳ್ಳೆಯದು, ಏಕೆಂದರೆ ಅದರಲ್ಲಿ ನೀರಿನ ಅಂಶವು ಹೆಚ್ಚಾಗಿರುತ್ತದೆ. ಇದು ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕದ ಸಮೃದ್ಧ ಮೂಲವಾಗಿದೆ, ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸುತ್ತದೆ. ಇದರಲ್ಲಿರುವ ಫೈಬರ್ ಅಧಿಕ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ. ಆದ್ದರಿಂದ ನಿಯಮಿತವಾಗಿ ಟೊಮೆಟೊ ರಸವನ್ನು ಕುಡಿಯಿರಿ.
ಸೋಯಾ ಮಿಲ್ಕ್ ಆರೋಗ್ಯಕ್ಕೆ ತುಂಬಾ ಹಿತಕಾರಿಯಾಗಿದೆ. ಏಕೆಂದರೆ ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ದೈನಂದಿನ ಆಹಾರದಲ್ಲಿ ಶಾಮೀಲುಗೊಳಿಸಿದರೆ ಉತ್ತಮ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)