ತುಳಸಿ ಎಲೆಯನ್ನು ಹೀಗೆ ಸೇವಿಸಿ ಹರಳುಗಟ್ಟಿ ಕುಳಿತಿರುವ ಯೂರಿಕ್ ಆಸಿಡ್ ಪುಡಿಯಾಗುವುದು! ಕಿಡ್ನಿ ಸ್ಟೋನ್ ಕೂಡಾ ಕರಗಿ ನೀರಾಗುವುದು
ತುಳಸಿ ಎಲೆಗಳನ್ನು ನಿಯಮಿತವಾಗಿ ಜಗಿಯುವುದರಿಂದ ನಿಮ್ಮ ದೇಹದಲ್ಲಿ ಯೂರಿಕ್ ಆಮ್ಲವನ್ನು ಕರಗಿಸಲು ಸಹಾಯ ಮಾಡುತ್ತದೆ.ಯೂರಿಕ್ ಆಮ್ಲವನ್ನು ನಿಯಂತ್ರಿಸುವಲ್ಲಿ ತುಳಸಿ ಎಲೆಗಳು ಹೇಗೆ ಪ್ರಯೋಜನಕಾರಿ ನೋಡೋಣ.
ತುಳಸಿ ಎಲೆಗಳು ದೇಹವನ್ನು ನಿರ್ವಿಷಗೊಳಿಸುವ ಗುಣವನ್ನು ಹೊಂದಿವೆ.ಇದರ ಎಲೆಗಳು ಮೂತ್ರವರ್ಧಕ ಗುಣಗಳನ್ನು ಹೊಂದಿವೆ.ಹಾಗಾಗಿ ಇದು ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಇದು ಕಿಡ್ನಿ ಸ್ಟೋನ್ ರಚನೆಯಾಗುವುದನ್ನು ತಡೆಯುತ್ತದೆ. ಮಾತ್ರವಲ್ಲ ಕಿಡ್ನಿ ಸ್ಟೋನ್ ಅನ್ನು ಕರಗಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.
ಮೃದುವಾದ ತುಳಸಿ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ಅಗಿದು ಸೇವಿಸಬೇಕು. ಇದು ಮಾನಸಿಕ ಆರೋಗ್ಯ ಮತ್ತು ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ.
ತುಳಸಿ ಕಷಾಯವು ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ. 2 ರಿಂದ 3 ತುಳಸಿ ಎಲೆಗಳನ್ನು ಚೆನ್ನಾಗಿ ತೊಳೆದು 1 ಕಪ್ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ. ನಂತರ, ನೀರನ್ನು ಫಿಲ್ಟರ್ ಮಾಡಿ ಮತ್ತು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಮಲಗುವ ಮೊದಲು ಕುಡಿಯಿರಿ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.