ಬೆಳಗ್ಗೆ ಎದ್ದ ಕೂಡಲೇ ನೀರಿಗೆ ಒಂದು ಚಿಟಕಿ ಈ ಪುಡಿ ಬೆರೆಸಿ ಕುಡಿದರೆ ದೇಹದಿಂದ ಹೊರ ಬರುವುದು ಯೂರಿಕ್ ಆಸಿಡ್ ! ಕಿಡ್ನಿ ಸ್ಟೋನ್ ಕೂಡಾ ಪುಡಿಯಾಗುವುದು
ಕಿಡ್ನಿಗಳು ಸರಿಯಾಗಿ ಕೆಲಸ ಮಾಡದೇ ಇದ್ದಾಗ ಕೀಲುಗಳ ಸುತ್ತ ಹರಳುಗಳ ರೂಪದಲ್ಲಿ ಶೇಖರಣೆಯಾಗಲು ಪ್ರಾರಂಭಿಸುತ್ತದೆ.ಇದರಿಂದಾಗಿ ನೋವು, ಊತ, ಕೀಲುಗಳಲ್ಲಿ ನಡೆಯಲು ತೊಂದರೆಯಂತಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಕೆಲವು ಮನೆಮದ್ದುಗಳ ಸಹಾಯದಿಂದ ಯೂರಿಕ್ ಆಸಿಡ್ ಅನ್ನು ಕರಗಿಸಬಹುದು. ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಪರಿಣಾಮಕಾರಿ ಮನೆಮದ್ದು ಎಂದರೆ ಅರಶಿನ ನೀರು.
ಅರಿಶಿನ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಹೆಚ್ಚಿದ ಯೂರಿಕ್ ಆಮ್ಲವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಅರಿಶಿನದಲ್ಲಿ ಕಂಡು ಬರುವ ಕರ್ಕ್ಯುಮಿನ್ ಎಂಬ ಸಂಯುಕ್ತ, ಕೀಲು ನೋವು ಮತ್ತು ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಸಂಧಿವಾತ ಮತ್ತು ಆಸ್ಟಿಯೊಪೊರೋಸಿಸ್‌ನಂತಹ ಕಾಯಿಲೆಗಳ ಅಪಾಯವೂ ಕಡಿಮೆಯಾಗುತ್ತದೆ.
ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ಚಿಟಿಕೆ ಅರಿಶಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ದೇಹದಿಂದ ಹಿಒರ ಹೋಗುತ್ತದೆ.
ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಸ್ಟೋನ್ ರೂಪುಗೊಳ್ಳುವ ಸಾಧ್ಯತೆ ಇರುತ್ತದೆ. ಇದು ಕಿಡ್ನಿ ಸ್ಟೋನ್ ಅಪಾಯವನ್ನು ಕೂಡಾ ತಪ್ಪಿಸುತ್ತದೆ.
ಸೂಚನೆ :ಈ ಸುದ್ದಿಯನ್ನು ಬರೆಯುವಲ್ಲಿ ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಳ್ಳಲಾಗಿದೆ. ಜೀ ನ್ಯೂಸ್ ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.