Aadhar Card ಸಂಬಂಧ ಮಹತ್ವದ ಮಾರ್ಗಸೂಚಿ ಹೊರಡಿಸಿದ UIDAI: ಏನೆಂದು ತಿಳಿದುಕೊಳ್ಳಿ

Aadhar Card guideline: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕಾಲಕಾಲಕ್ಕೆ, UIDAI ನಿಂದ ಆಧಾರ್‌ಗೆ ಸಂಬಂಧಿಸಿದ ಅಪ್ಡೇಟ್ ಗಳು ಬರುತ್ತಲೇ ಇರುತ್ತವೆ. ಇದರಿಂದಾಗಿ ಬಳಕೆದಾರರು ಸಮಸ್ಯೆ ಎದುರಿಸದೆ, ತಮ್ಮ ಕೆಲಸಗಳನ್ನು ಸರಾಗವಾಗಿ ಮಾಡಬಹುದು.

1 /4

ಯುಐಡಿಎಐ ತನ್ನ ಅಧಿಕೃತ ಟ್ವೀಟ್‌ನಲ್ಲಿ “ಈಗ ನೀವು ಕೇವಲ 50 ರೂಪಾಯಿಗಳ ಶುಲ್ಕವನ್ನು ಪಾವತಿಸುವ ಮೂಲಕ ಆಧಾರ್ ನಲ್ಲಿರುವ ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ, ಮೊಬೈಲ್ ಮತ್ತು ಇಮೇಲ್ ಗಳನ್ನು ಸುಲಭವಾಗಿ ಅಪ್ಡೇಟ್ ಮಾಡಬಹುದು” ಎಂದು ಬರೆದಿದೆ.

2 /4

ನಿಮ್ಮ ಹೆಸರು, ವಿಳಾಸ, ಜನ್ಮದಿನಾಂಕ ಎಲ್ಲವನ್ನೂ ಆಧಾರ್ ಕಾರ್ಡ್‌ನಲ್ಲಿ ಅಪ್ಡೇಟ್ ಮಾಡುವುದು ಬಹಳ ಮುಖ್ಯ. ಇದನ್ನು ಅಪ್ಡೇಟ್ ಮಾಡದಿದ್ದರೆ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ಪಡೆಯುವಲ್ಲಿಯೂ ನಿಮಗೆ ತೊಂದರೆಯಾಗಬಹುದು.

3 /4

ನಿಮ್ಮ ಆಧಾರ್‌ನಲ್ಲಿರುವ ವಿಳಾಸವನ್ನು ಬದಲಾಯಿಸುವುದರ ಜೊತೆಗೆ ನೀವು ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಇ-ಆಧಾರ್ ಅನ್ನು ಡೌನ್‌ಲೋಡ್ ಮಾಡಬಹುದು. ನಿಮ್ಮ ಸಂಖ್ಯೆಯನ್ನು ಆಧಾರ್‌ನಲ್ಲಿ ಅಪ್ಡೇಟ್ ಮಾಡಿದರೆ, ನೀವು ಆದಾಯ ತೆರಿಗೆ ರಿಟರ್ನ್ ಅನ್ನು ಸಹ ಪರಿಶೀಲಿಸಬಹುದು. ಇದಲ್ಲದೆ, ಎನ್‌ಪಿಎಸ್ ಖಾತೆಯನ್ನು ಸಹ ತೆರೆಯಬಹುದು.

4 /4

ಇದಲ್ಲದೇ, ನಿಮ್ಮ ಹತ್ತಿರದ ಆಧಾರ್ ಸೇವಾ ಕೇಂದ್ರದ ಬಗ್ಗೆಯೂ ನೀವು ಕೇವಲ ಒಂದು ಕ್ಲಿಕ್‌ನಲ್ಲಿ ತಿಳಿದುಕೊಳ್ಳಬಹುದು. ಇದಕ್ಕಾಗಿ ನೀವು ಈ ಲಿಂಕ್ ಅನುಸರಿಸಿ: https://bhuvan.nrsc.gov.in/aadhaar/