ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಜೈಲಿನಲ್ಲಿ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸುವಂತೆ ವಿಶ್ವಸಂಸ್ಥೆ ಪಾಕಿಸ್ತಾನ ಸರ್ಕಾರಕ್ಕೆ ಆಗ್ರಹಿಸಿದೆ. ಅಷ್ಟೇ ಅಲ್ಲದೆ ಅವರ ಸುದೀರ್ಘಕಾಲದಾ ಬಂಧನಕ್ಕೆ ಕೊನೆಹಾಡುವಂತೆ ಸೂಚಿಸಿದೆ.
1/5ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಜೈಲಿನಲ್ಲಿ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸುವಂತೆ ವಿಶ್ವಸಂಸ್ಥೆ ಪಾಕಿಸ್ತಾನ ಸರ್ಕಾರಕ್ಕೆ ಆಗ್ರಹಿಸಿದೆ. ಅಷ್ಟೇ ಅಲ್ಲದೆ ಅವರ ಸುದೀರ್ಘಕಾಲದಾ ಬಂಧನಕ್ಕೆ ಕೊನೆಹಾಡುವಂತೆ ಸೂಚಿಸಿದೆ.
2/5ಇತ್ತೀಚಿಗೆ ಇಮ್ರಾನ್ ಖಾನ್ ಅವರನ್ನು ಮಾನಸಿಕ ಹಿಂಸೆಗೆ ಒಳಪಡಿಸಲಾಗುತ್ತಿದೆ ಎಂದು ಅವರ ಸಹೋದರಿ ಆರೋಪಿಸಿದ್ದರು.ಆದರೆ ಪಾಕಿಸ್ತಾನದ ಸರ್ಕಾರ ಇನ್ನೂ ಅಧಿಕೃತ ಪ್ರತಿಕ್ರಿಯೆಯನ್ನು ನೀಡಿಲ್ಲ.
3/5ಈ ಕುರಿತಾಗಿ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ವಿಶೇಷ ವರದಿಗಾರ್ತಿ ಆಲಿಸ್ ಜಿಲ್ ಎಡ್ವರ್ಡ್ಸ್'ಇಮ್ರಾನ್ ಖಾನ್ ಅವರ ಬಂಧನವು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಮಾನದಂಡಗಳಿಗೆ ಅನುಗುಣವಾಗಿರುವುದನ್ನು ಪಾಕಿಸ್ತಾನ ಸರ್ಕಾರ ಖಚಿತಪಡಿಸಿಕೊಳ್ಳಬೇಕು' ಹೇಳಿದ್ದಾರೆ.
4/5ಈ ವರ್ಷ ಸೆಪ್ಟೆಂಬರ್‌ನಲ್ಲಿ, ಇಮ್ರಾನ್ ಖಾನ್ ಅವರ ಕಾನೂನು ತಂಡವು ಅವರು ಮತ್ತು ಅವರ ಪತ್ನಿ ಜೈಲಿನಲ್ಲಿ ಎದುರಿಸಿದ ದೌರ್ಜನ್ಯದ ಬಗ್ಗೆ ವಿಶ್ವಸಂಸ್ಥೆಯ ವಿಶೇಷ ವರದಿಗಾರರನ್ನು ಸಂಪರ್ಕಿಸಿತ್ತು.
5/5ಸೆಪ್ಟೆಂಬರ್ 26, 2023 ರಂದು ಇಮ್ರಾನ್ ಖಾನ್ ಅವರನ್ನು ರಾವಲ್ಪಿಂಡಿಯ ಅಡಿಯಾಲಾ ಜೈಲಿಗೆ ವರ್ಗಾಯಿಸಲಾಯಿತು ಮತ್ತು ಅಂದಿನಿಂದ ಅವರು ಜೈಲಿನಲ್ಲಿ ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಪ್ರತಿನಿಧಿ ಹೇಳಿದ್ದಾರೆ.