Govt Scheme: ಕೇಂದ್ರದಿಂದ 5 ಲಕ್ಷ ರೂಪಾಯಿ ಉಚಿತ ಆರೋಗ್ಯ ವಿಮೆ.. ಆನ್‌ಲೈನ್ ನೋಂದಣಿ ಪ್ರಕ್ರಿಯೆಯ ನೇರ ಲಿಂಕ್ ಇಲ್ಲಿದೆ
Ayushman Bharat Yojana: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಈ ಯೋಜನೆ ರೂಪಿಸಿದೆ. ದೇಶದ ಹಿರಿಯ ನಾಗರಿಕರ ಆರೋಗ್ಯವನ್ನು ಸುಧಾರಿಸುವ ಉದ್ದೇಶದ ಅಡಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಘೋಷಿಸಲಾಗಿದೆ.
ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ ನೀಡಲಾಗುವುದು.
ಈ ಯೋಜನೆ ಮೊದಲು ಜಾರಿಯಾದಾಗ ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಆದರೆ ಈಗ ಆರ್ಥಿಕ ಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಳ್ಳದೇ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೆ ಈ ಯೋಜನೆ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ಭಾರತದಲ್ಲಿ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ವಿಶೇಷವಾದ ಆಯುಷ್ಮಾನ್ ಕಾರ್ಡ್ ಪಡೆಯಬಹುದಾಗಿದೆ. ಹಿರಿಯ ನಾಗರಿಕರಿಗೆ ವಾರ್ಷಿಕ 5 ಲಕ್ಷ ರೂಪಾಐಿ ಹೆಲ್ತ್ ಕವರೇಜ್ ಈ ಯೋಜನೆ ಅಡಿಯಲ್ಲಿ ದೊರೆಯುತ್ತದೆ.
NHA ವೆಬ್‌ಸೈಟ್ https://nha.gov.in/ ಅಥವಾ ಆಯುಷ್ಮಾನ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು. ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ನೋಂದಣಿ ಪ್ರಕ್ರಿಯೆಗೆ ಬೇಕಾಗುತ್ತದೆ.
ಆನ್ಲೈನ್ ನೋಂದಣಿ : ಅಧಿಕೃತ NHA ಪೋರ್ಟಲ್ https://nha.gov.in/ ಓಪನ್ ಮಾಡಿ. ಪೋರ್ಟಲ್‌ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಹಾಕಿ OTP ಮೂಲಕ ಲಾಗಿನ್ ಆಗಿ. KYC ಪರಿಶೀಲನೆಯನ್ನು ಪೂರ್ಣಗೊಳಿಸಿದ ಬಳಿಕ ಫೋಟೋ ಅಪ್‌ಲೋಡ್ ಮಾಡಿ. ಅನುಮೋದನೆ ಬಳಿಕ ಆಯುಷ್ಮಾನ್ ಕಾರ್ಡ್ ಡೌನ್‌ಲೋಡ್ ಮಾಡಿ.
ಆಯುಷ್ಮಾನ್ ಅಪ್ಲಿಕೇಶನ್: ಮೊಬೈಲ್ ಆಪ್ ಸ್ಟೋರ್ ಮೂಲಕ ಆಯುಷ್ಮಾನ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ. OTP ಮೂಲಕ ಲಾಗಿನ್ ಆಗಿ. ಇ-ಕೆವೈಸಿ ಪೂರ್ಣಗೊಂಡ ಬಳಿಕ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿ.