Union Budget 2024: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ಗುರಿ

Union Budget 2024 Updates: ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

Union Budget 2024 Updates: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಗುರುವಾರ ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಅವರು, ʼದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್‌ ವ್ಯವಸ್ಥೆ ಒದಗಿಸಲು ಒತ್ತು ಕೊಡಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆʼ ಎಂದು ಹೇಳಿದ್ದಾರೆ. ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯಗಳೂ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿದಾಗ ಸರ್ಕಾರದ ಮುಂದೆ ಹಲವು ಸವಾಲುಗಳಿದ್ದವು. ಸಾರ್ವಜನಿಕರ ಹಿತದೃಷ್ಟಿಯಿಂದ ದೇಶದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಜನರಿಗೆ ಉದ್ಯೋಗವನ್ನು ಪಡೆಯಲು ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ರೂಪಿಸಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯತ್ತ ಸರ್ಕಾರದ ಗಮನ ಕೇಂದ್ರೀಕರಿಸಿದೆ. ಎಲ್ಲಾ ವರ್ಗ ಮತ್ತು ಜನರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯುತ್ತಿದೆ. 2047ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

2 /5

ʼಕಿಸಾನ್ ಸಂಪದ ಯೋಜನೆʼಯಿಂದ ಸುಮಾರು 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರವು ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ʼಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆʼ ವಿಸ್ತರಿಸಲಾಗುವುದು. ʼಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನʼ ಎಂಬ ಪ್ರಧಾನಿ ಮೋದಿಯವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

3 /5

ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ. ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯಡಿ ಗ್ರಾಮೀಣ ಪ್ರದೇಶದಲ್ಲಿ ಶೇ.70ರಷ್ಟು ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ. ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು. ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

4 /5

ಸ್ಕಿಲ್ ಇಂಡಿಯಾ ಮಿಷನ್ ಯೋಜನೆಯಡಿ 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದೆ. 54 ಲಕ್ಷ ಯುವಕರಿಗೆ ಉತ್ತಮ ತರಬೇತಿ ನೀಡಲಾಗಿದ್ದು, 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ. ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ 10 ವರ್ಷಗಳಲ್ಲಿ ಶೇ.28ರಷ್ಟು ಹೆಚ್ಚಾಗಿದೆ. ಬಡವರು, ಮಹಿಳೆಯರು ಮತ್ತು ಯುವಕರ ಕಡೆ ಗಮನ ಹರಿಸುವ ಅಗತ್ಯವಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

5 /5

ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರದಿಂದ ಅನುದಾನದ ವ್ಯವಸ್ಥೆ ಮಾಡಲಾಗುವುದು. ಪ್ರವಾಸೋದ್ಯಮ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು. ಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.