Union Budget 2024: ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ʼಆಯುಷ್ಮಾನ್ ಭಾರತ್ʼ ಸೌಲಭ್ಯ
ದೇಶದ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನಗಳ ವಿಸ್ತರಿಸಣೆ ಮಾಡಲಾಗುತ್ತದೆ. ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ ಅಂತಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಡವರ ಶ್ರೇಯೋಭಿವೃದ್ಧಿಯಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ. ʼಸಬ್ ಕಾ ಸಾಥ್ʼ ಧ್ಯೇಯದೊಂದಿಗೆ ಸರ್ಕಾರವು 25 ಕೋಟಿ ಜನರಿಗೆ ಬಡತನದಿಂದ ಹೊರಬರುವಂತೆ ಮಾಡಲು ನೆರವಾಗಿದೆ. ನೇರ ನಗದು ವರ್ಗಾವಣೆ ಮೂಲಕ 34 ಲಕ್ಷ ಕೋಟಿ ರೂ.ವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಅಂತಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.
ಸೋಲಾರ್ ಸಂಪರ್ಕ (Rooftop solarisation) ಯೋಜನೆಯು 1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಖಾತರಿಪಡಿಸುತ್ತದೆ. ಇದು ವಾರ್ಷಿಕ 15,000 - 18,000 ರೂ.ನಷ್ಟು ಉಳಿತಾಯ ಮಾಡಲು ಕುಟುಂಬಗಳಿಗೆ ನೆರವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
24ನೇ ಹಣಕಾಸು ವರ್ಷದ ಅಂದಾಜು ವೆಚ್ಚವನ್ನು 44.90 ಲಕ್ಷ ಕೋಟಿ ರೂ.ಗೆ ಪರಿಷ್ಕರಿಸಲಾಗಿದೆ. ಪೂರೈಕೆ ಸರಪಳಿಗಳು, ಪ್ರಾಥಮಿಕ ಮತ್ತು ಮಾಧ್ಯಮಿಕ ಸಂಸ್ಕರಣೆ, ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಸೇರಿದಂತೆ ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಯನ್ನು ಸರ್ಕಾರವು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.