ನಾಳೆ ತುಮಕೂರಿಗೆ ಅಮಿತ್ ಶಾ: ನವವಧುವಿನಂತೆ ಅಲಂಕೃತಗೊಂಡ ಕಲ್ಪವೃಕ್ಷದ ನಾಡು

Thu, 31 Mar 2022-9:52 pm,
Amit Shah to Visit Siddaganga Mutt

ಕೇಂದ್ರ ಗೃಹ ಅಮಿತ್ ಶಾ ಅವರು ನಾಳೆ ತುಮಕೂರಿಗೆ ಭೇಟಿ ನೀಡಲಿದ್ದಾರೆ. ಅವರನ್ನು ಸ್ವಾಗತಿಸಲು ಕಲ್ಪವೃಕ್ಷದ ನಾಡು ನವವಧುವಿನಂತೆ ಅಲಂಕೃತಗೊಂಡಿದೆ. ಶುಕ್ರವಾರ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದ್ದು, ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಮಿತ್ ಶಾ ಹಾಗೂ ಪ್ರಹ್ಲಾದ್ ಜೋಶಿ, ಭಗವಂತ್ ಖೂಬ ಸೇರಿ ಕೇಂದ್ರ ನಾಯಕರು ಆಗಮಿಸಲಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.​​ಯಡಿಯೂರಪ್ಪ ಸೇರಿ ರಾಜ್ಯದ ಹಲವು ಸಚಿವರು ಆಗಮಿಸಲಿದ್ದಾರೆ.  

Amit Shah to Visit Siddaganga Mutt

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರ (DR. Shivakumara swamiji) 115ನೇ ಜಯಂತ್ಯೋತ್ಸವದಲ್ಲಿ ಭಾಗಿಯಾಗುವ ಉದ್ದೇಶದಿಂದ ಶುಕ್ರವಾರ ಸಿದ್ಧಗಂಗಾ ಮಠಕ್ಕೆ (Siddaganga Mutt) ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಭೇಟಿ ನೀಡುತ್ತಿದ್ದಾರೆ.

Amit Shah to Visit Siddaganga Mutt

ಅಮಿತ್ ಶಾ ಅವರು ತುಮಕೂರಿಗೆ ಭೇಟಿ ನೀಡುತ್ತಿರುವ ಹಿನ್ನಲೆ ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ. ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai)ಅವರು ತುಮಕೂರಿ(Tumkur)ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಾನಸೌಧದಿಂದ ನೇರವಾಗಿ ತುಮಕೂರಿಗೆ ತೆರಳಿದ ಅವರು ನಾಳೆ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆಯನ್ನು ವೀಕ್ಷಿಸಿದರು.

 

ಕೇಂದ್ರ ಗೃಹ ಸಚಿವರ ಆಗಮನ ಹಿನ್ನಲೆ ತುಮಕೂರು ನಗರ ಮತ್ತು ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ. ತುಮಕೂರು ವಿವಿ ಹೆಲಿಪ್ಯಾಡ್‍ನಿಂದ ಹಿಡಿದು ಸಿದ್ದಗಂಗಾ ಮಠದವರೆಗೂ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಸುಮಾರು ಒಂದೂವರೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.  

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ಮುನ್ನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಡಾ.ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಅವರು ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link