Salman Khan: ಬುರ್ಖಾ ಧರಿಸಿದ ಮಹಿಳೆಯೊಬ್ಬರು ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರಿಗೆ ಜೈಲು ಶಿಕ್ಷೆಗೊಳಗಾದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಬಳಸಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಜ್ಞೆಯ ಮೇರೆಗೆ ಸಲ್ಮಾನ್ ಖಾನ್ ಅವರ ಬಾಂದ್ರಾ ಮನೆಯ ಮೇಲೆ ಗ್ಯಾಂಗ್ ಗುಂಡು ಹಾರಿಸಿದ ತಿಂಗಳುಗಳ ನಂತರ ಈ ಘಟನೆ ನಡೆದಿದೆ.
ಬುರ್ಖಾ ಧರಿಸಿದ ಮಹಿಳೆಯೊಬ್ಬರು ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರಿಗೆ ಜೈಲು ಶಿಕ್ಷೆಗೊಳಗಾದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಬಳಸಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಆಜ್ಞೆಯ ಮೇರೆಗೆ ಸಲ್ಮಾನ್ ಖಾನ್ ಅವರ ಬಾಂದ್ರಾ ಮನೆಯ ಮೇಲೆ ಗ್ಯಾಂಗ್ ಗುಂಡು ಹಾರಿಸಿದ ತಿಂಗಳುಗಳ ನಂತರ ಈ ಘಟನೆ ನಡೆದಿದೆ.
ಮುಂಬೈನ ಕಾರ್ಟರ್ ರಸ್ತೆಯಲ್ಲಿ ಬುಧವಾರ ಸಲೀಂ ಖಾನ್‌ಗೆ ಬೈಕ್‌ನಲ್ಲಿ ಬಂದ ಪುರುಷ ಮತ್ತು ಮಹಿಳೆ ಬೆದರಿಕೆ ಹಾಕಿದ್ದಾರೆ. ಬಾಂದ್ರಾ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು, ಪತ್ತೆ ಹಚ್ಚುವ ಕಾರ್ಯ ಶುರು ಮಾಡಿದ್ದಾರೆ.
ಮಹಿಳೆ ಸಲೀಂ ಖಾನ್ ಅವರನ್ನು ಸಂಪರ್ಕಿಸಿ, "ಲಾರೆನ್ಸ್ ಬಿಷ್ಣೋಯಿ ಕೊ ಬುಲೌ ಕ್ಯಾ (ನಾನು ಲಾರೆನ್ಸ್ ಬಿಷ್ಣೋಯ್ ಎಂದು ಕರೆಯಬೇಕೇ)" ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು ತಮಾಷೆಯಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಲೀಂ ಖಾನ್ ಬುಧವಾರ ಬೆಳಗಿನ ವಾಲ್ಕಿಂಗ್ ಮುಗಿಸಿ ವಾಪಸಾಗುವಾಗ ಈ ಘಟನೆ ನಡೆದಿದೆ. ರಾಪರ್ ಸಿಧು ಮೂಸೆವಾಲಾ ಅವರ ಹತ್ಯೆಯಲ್ಲಿ ಭಾಗಿಯಾಗಿರುವ ಭೀಕರ ಗ್ಯಾಂಗ್‌ಸ್ಟರ್ ಬಿಷ್ಣೋಯ್, ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು.
ಏಪ್ರಿಲ್ 14 ರ ಮುಂಜಾನೆ ಸಲ್ಮಾನ್ ಖಾನ್ ಅವರ ನಿವಾಸದ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಐದು ಸುತ್ತು ಗುಂಡು ಹಾರಿಸಿದ್ದರು. ದಾಳಿಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡವಿದೆ ಎಂದು ಹೇಳಿರುವ ಪೊಲೀಸರು ಈ ಪ್ರಕರಣದಲ್ಲಿ ಇದುವರೆಗೆ ಆರು ಜನರನ್ನು ಬಂಧಿಸಿದ್ದಾರೆ. ಮುಂಬೈ ಪೊಲೀಸರು ಬಿಷ್ಣೋಯ್ ಸೇರಿದಂತೆ ಕನಿಷ್ಠ ಒಂಬತ್ತು ಆರೋಪಿಗಳ ವಿರುದ್ಧ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಯನ್ನು ಜಾರಿಗೊಳಿಸಿದ್ದಾರೆ.
ಈ ಹಿಂದೆ, ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ವಿಷ್ಣೋಯ್ ಶೂಟರ್‌ಗಳನ್ನು ಪ್ರೇರೇಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 15, 2024 ರಂದು ಪನ್ವೇಲ್‌ನಲ್ಲಿ ಶಸ್ತ್ರಾಸ್ತ್ರ ವಿತರಣೆಯನ್ನು ಸ್ವೀಕರಿಸಿದ ನಂತರ, ಅನ್ಮೋಲ್ ಶೂಟರ್‌ಗಳಿಗೆ ಗುರಿಯ ಮಾಹಿತಿಯನ್ನು ಒದಗಿಸಿದರು, ನಟನ ನಿವಾಸದಲ್ಲಿ ಗುಂಡಿನ ದಾಳಿ ನಡೆಸಲು ಸೂಚಿಸಿದ್ದರು ಎಂದು ತಿಳಿದು ಬಂದಿದೆ.