Urvashi Rautela: ಓವರ್ ಮೇಕಪ್‌ನಿಂದ ಟ್ರೋಲರ್ಸ್ ಕಂಗಣ್ಣಿಗೆ ಗುರಿಯಾದ ಐರಾವತ ಬೆಡಗಿ!
ಬಹುಭಾಷಾ ನಟಿ ಊರ್ವಶಿ ರೌಟೇಲಾ ಇದೀಗ ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದು, ಇದೀಗ ಗ್ಲ್ಯಾಮರಸ್ ಕಾಣಿಸಿಕೊಂಡಿರುವ ಫೋಟೋಸ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
ಊರ್ವಶಿ ರೌಟೇಲಾ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಿರುವರು, ಸುಂದರವಾದ ಮಿನುಗುವ ಡ್ರೆಸ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ.
ನಟಿ ಊರ್ವಶಿ ರೌಟೇಲಾ ಹೊಸ ಫೋಟೋ ಶೇರ್ ಮಾಡ್ತಿದ್ದಂತೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡು, ಓವರ್ ಮೇಕಪ್ ನೋಡಿ ನೆಟ್ಟಿಗರು ಸಖತ್ ಟ್ರೋಲ್ ಮಾಡ್ತಿದ್ದಾರೆ.
ಊರ್ವಶಿಗೆ ಮಲಗುವಾಗಲೂ ಮೇಕಪ್ ತೆಗೆಯಲ್ಲ ಅನಿಸುತ್ತೆ ಎಂದೆಲ್ಲಾ ನೆಟ್ಟಿಗರು ಬಗೆ ಬಗೆಯ ಕಾಮೆಂಟ್ ಮಾಡಿದ್ದು, ಸದ್ಯ ಈಕೆ ಟ್ರೋಲರ್ಸ್ ಬಾಯಿಗೆ ಆಹಾರವಾಗಿದ್ದಾರೆ.
ನಟಿ ಊರ್ವಶಿ ಸುಂದರವಾಗಿ ರೆಡಿಯಾಗಿದ್ದು, ಅವರ ಓವರ್ ಮೇಕಪ್‌ಗೆ ಟ್ರೋಲ್ ಆಗ್ತಿದ್ದಾರೆ. ಆದರೆ ಇವರಿಗೆ ಟ್ರೋಲ್ ಆಗೋದು ಇದೇ ಮೊದಲ ಬಾರಿ ಏನೇನಲ್ಲ.
ಊರ್ವಶಿ ರೌಟೇಲಾ ಈ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಐರಾವತ ಸಿನಿಮಾದಲ್ಲಿ ಬಣ್ಣ ಹಚ್ಚಿದವರು, ಈಕೆ ಕನ್ನಡ ಸೇರಿದಂತೆ ತೆಲುಗು, ಹಿಂದೆ ಚಿತ್ರಗಳಲ್ಲಿಯೂ ಸಹ ಅಭಿನಯಿಸಿದ್ದಾರೆ.
ಬಹುಭಾಷಾ ನಟಿ ಊರ್ವಶಿ ಸಿನಿಮಾಗಳಲ್ಲಿ ಮಾತ್ರವಲ್ಲದೆ ಸಾಕಷ್ಟು ಜಾಹೀರಾತುಗಳಿಗೆ ರೂಪದರ್ಶಿಯಾಗಿ ಕೂಡ ಕಾಣಿಸಿಕೊಂಡಿದ್ದಾರೆ.