ಕೊತ್ತಂಬರಿ ಸೊಪ್ಪನ್ನು ಹೀಗೆ ಸೇವಿಸಿ ಕೀಲುಗಳ ಸುತ್ತ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗುವುದು !
ಕೊತ್ತಂಬರಿ ಸೊಪ್ಪು ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ.ಇದು ದೇಹದಿಂದ ವಿಷವನ್ನು ತೆಗೆದುಹಾಕುವ ಗುಣವನ್ನು ಹೊಂದಿದ್ದು, ಮೂತ್ರದ ಮೂಲಕ ಯೂರಿಕ್ ಆಸಿಡ್ ಅನ್ನು ಹೊರ ಹಾಕುತ್ತದೆ.
ಕೊತ್ತಂಬರಿ ಸೊಪ್ಪು ಮೂತ್ರವು ಸರಿಯಾಗಿ ಹೊರಬರುವಂತೆ ಮಾಡುತ್ತದೆ. ಕೊತ್ತಂಬರಿ ಸೊಪ್ಪಿನಲ್ಲಿರುವ ಗುಣಲಕ್ಷಣಗಳು ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ.
ಒಂದು ಹಿಡಿ ಕೊತ್ತಂಬರಿ ಸೊಪ್ಪನ್ನು 2 ಕಪ್ ನೀರಿನಲ್ಲಿ ಹಾಕಿ ಸುಮಾರು 10 ನಿಮಿಷ ಕುದಿಸಿ.ನಂತರ,ಈ ನೀರನ್ನು ಫಿಲ್ಟರ್ ಮಾಡಿ ಮತ್ತು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.ರುಚಿಗಾಗಿ ನಿಂಬೆರಸ ಮತ್ತು ಸ್ವಲ್ಪ ಜೇನುತುಪ್ಪವನ್ನು ಕೂಡ ಬೆರೆಸಬಹುದು.
ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಕೊತ್ತಂಬರಿ ಸೊಪ್ಪಿನ ಚಟ್ನಿಯನ್ನು ಸೇವಿಸುವುದು ತುಂಬಾ ಆರೋಗ್ಯಕರವಾಗಿರುತ್ತದೆ.
1 ಹಿಡಿ ಕೊತ್ತಂಬರಿ ಸೊಪ್ಪನ್ನು ತೆಗೆದುಕೊಂಡು 1 ಟೊಮೆಟೊ, 2 ರಿಂದ 3 ಹಸಿರು ಮೆಣಸಿನಕಾಯಿ ಮತ್ತು ಸ್ವಲ್ಪ ಉಪ್ಪು ಸೇರಿಸಿ ರುಬ್ಬಿಕೊಳ್ಳಿ.ಇದು ಕೂಡಾ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.