ಡೈ, ಹೇರ್ ಕಲರ್, ದುಬಾರಿ ಪ್ರಾಡಕ್ಟ್ ಬೇಡವೇ ಬೇಡ ! ಹಿತ್ತಲಲ್ಲೇ ಬೆಳೆಯುವ ಈ ಎಲೆ ನೀಡುವುದು ಬಿಳಿ ಕೂದಲಿಗೆ ಶಾಶ್ವತ ಪರಿಹಾರ
ಕಿರಿ ವಯಸ್ಸಿನಲ್ಲಿ ಬಿಳಿ ಕೂದಲು ಮೂಡುವುದು ಇತ್ತೀಚಿನ ದಿನಗಳಲ್ಲಿ ಯುವಕರು ಎದುರಿಸುವ ಸಾಮಾನ್ಯ ಸಮಸ್ಯೆ.
ಈ ಸಮಸ್ಯೆಯ ಪರಿಹಾರಕ್ಕಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಶಾಂಪೂ, ಕಂಡಿಷನರ್, ಎಣ್ಣೆ, ಬಣ್ಣ ಇತ್ಯಾದಿಗಳನ್ನು ಬಳಸುತ್ತೇವೆ. ಆದರೆ ಇವುಗಳಲ್ಲಿ ಅಪಾಯಕಾರಿ ರಾಸಾಯನಿಕ ಸೇರಿರುತ್ತವೆ.
ಈ ರಾಸಾಯನಿಕಗಳ ಬದಲು ನಾವು ಹೇಳುವ ಮನೆಮದ್ದನ್ನು ಬಳಸಿದರೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ಸಿಗುತ್ತದೆ.
ಮೆಲನಿನ್ ಕೊರತೆಯಿಂದಾಗಿ, ಕೂದಲು ಬಿಳಿಯಾಗುತ್ತವೆ. ಕರಿಬೇವಿನ ಎಲೆಗಳು ಕೂದಲಿನಲ್ಲಿರುವ ಮೆಲನಿನ್ ಕೊರತೆಯನ್ನು ಹೋಗಲಾಡಿಸುತ್ತದೆ.
ಮಾಸ್ಕ್ ಮಾಡಲು, ಕರಿಬೇವಿನ ಎಲೆಗಳು, ತೆಂಗಿನ ಎಣ್ಣೆ, ಬೇವಿನ ಎಲೆಗಳು, ವಿಟಮಿನ್ ಇ ಕ್ಯಾಪ್ಸುಲ್ ಗಳು ಮತ್ತು ಮೊಸರು ಬೇಕಾಗುತ್ತದೆ.
ಹೇರ್ ಮಾಸ್ಕ್ ಮಾಡಲು ಕರಿಬೇವಿನ ಸೊಪ್ಪು ಮತ್ತು ಬೇವಿನ ಸೊಪ್ಪನ್ನು ಮಿಕ್ಸಿಯಲ್ಲಿ ರುಬ್ಬಿ. ಇನ್ನೊಂದು ಪಾತ್ರೆಯಲ್ಲಿ ತೆಂಗಿನೆಣ್ಣೆ, ವಿಟಮಿನ್ ಇ ಕ್ಯಾಪ್ಸುಲ್ ಮತ್ತು ಮೊಸರು ಹಾಕಿ ಸರಿಯಾಗಿ ಬೀಟ್ ಮಾಡಿ. ಅದರ ನಂತರ ಈ ಮಿಶ್ರಣವನ್ನು ಸ್ವಲ್ಪ ಬಿಸಿ ಮಾಡಿ. ಅದು ತಣ್ಣಗಾದ ನಂತರ ಕರಿಬೇವಿನ ಸೊಪ್ಪು ಮತ್ತು ಬೇವಿನ ಸೊಪ್ಪಿನ ಮಿಶ್ರಣವನ್ನು ಹಾಕಿ ಚೆನ್ನಾಗಿ ಕಲಸಿ. ನಿಮ್ಮ ಹೇರ್ ಮಾಸ್ಕ್ ರೆಡಿಯಾಗುತ್ತದೆ.
ಕೂದಲಿಗೆ ಹೇರ್ ಮಾಸ್ಕ್ ಹಚ್ಚುವ ಮೊದಲು, ಕೂದಲನ್ನು ಸರಿಯಾಗಿ ತೊಳೆದು ಒಣಗಿಸಿ. ನಂತರ ಹೇರ್ ಮಾಸ್ಕ್ ಹಚ್ಚಿ, ಒಂದು ಗಂಟೆ ಬಿಟ್ಟು ಕೂದಲನ್ನು ತೊಳೆಯಿರಿ. ವಾರದಲ್ಲಿ ಎರಡು ಬಾರಿ ಈ ರೀತಿ ಮಾಡಿದರೆ ಬಿಳಿ ಕೂದಲ ಸಮಸ್ಯೆ ಮಾಯವಾಗಿ ಬಿಡುತ್ತದೆ.
ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.