ಮನೆಯಲ್ಲಿಯೇ ಸಿಗುವ ಈ ಐದು ವಸ್ತುಗಳನ್ನು ಬಳಸಿದರೆ ಸಿಗುವುದು ಕೂದಲು ಉದುರುವ ಸಮಸ್ಯೆಗೆ ಪರಿಹಾರ

ಮನೆಯಲ್ಲಿ ಸುಲಭವಾಗಿ ಸಿಗುವ ವಸ್ತುಗಳನ್ನು ಬಳಸುವ ಮೂಲಕ   ಕೂದಲುದುರುವ ಸಮಸ್ಯೆಯನ್ನು ಬಗೆಹರಿಸಬಹುದು. 

ಬೆಂಗಳೂರು : ಚಳಿಗಾಲದಲ್ಲಿ ಕೂದಲು ಉದುರುವ ಸಮಸ್ಯೆಯನ್ನು ಸಾಮಾನ್ಯವಾಗಿ ಎಲ್ಲರೂ ಎದುರಿಸುತ್ತಾರೆ. ಸ್ಕಾಲ್ಪ್ ಆರೋಗ್ಯ ಹದಗೆಡುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಇದಲ್ಲದೆ, ಶೀತ ವಾತಾವರಣದಲ್ಲಿ ಕೂದಲು ಉದುರುವುದಕ್ಕೆ ಶುಷ್ಕ ಗಾಳಿಯೂ ಕೂಡಾ ಕಾರಣವಾಗಿರಬಹುದು. ಚಳಿಗಾಲದಲ್ಲಿ ಕೂದಲು ಉದುರುವುದು, ಒಡೆಯುವುದು ಹೀಗೆ ನಾನಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ಮನೆಯಲ್ಲಿ ಸುಲಭವಾಗಿ ಸಿಗುವ ವಸ್ತುಗಳನ್ನು ಬಳಸುವ ಮೂಲಕ   ಕೂದಲುದುರುವ ಸಮಸ್ಯೆಯನ್ನು ಬಗೆಹರಿಸಬಹುದು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಮೆಂತ್ಯ ಬೀಜಗಳಲ್ಲಿ ಕಬ್ಬಿಣ ಮತ್ತು ಪ್ರೋಟೀನ್ ಅಂಶ ಹೇರಳವಾಗಿ ಕಂಡುಬರುತ್ತದೆ. ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅಲ್ಲದೆ, ಇದು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಮತ್ತು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದ್ದು, ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. 

2 /5

ಕುಂಬಳಕಾಯಿ ಬೀಜದ ಎಣ್ಣೆಯನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆ ನಿವಾರಣೆಯಾಗುತ್ತದೆ. ಮಾತ್ರವಲ್ಲ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು ಫ್ರೀ ರಾಡಿಕಲ್ ಹಾನಿಯನ್ನು ಕಡಿಮೆ ಮಾಡುತ್ತದೆ. ಮತ್ತು ಕೂದಲನ್ನು ಆರೋಗ್ಯಕರವಾಗಿರಿಸಲು ಸಹಾಯ ಮಾಡುತ್ತದೆ.

3 /5

ಕಬ್ಬಿಣ, ಮ್ಯಾಂಗನೀಸ್, ಸತು ಮತ್ತು ತಾಮ್ರದ ಅಂಶವನ್ನು ಒಳಗೊಂಡಿರುವ  ಕಾರಣ ಹಸಿರು ಸೇಬು ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಪೋಷಕಾಂಶಗಳು ಕೂದಲನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಹಸಿರು ಸೇಬಿನ ಎಲೆಗಳು ಮತ್ತು ಸಿಪ್ಪೆಗಳನ್ನು ಬಳಸುವುದರ ಮೂಲಕ ಕೂದಲನ್ನು ಸದೃಢಗೊಳಿಸಬಹುದು. ಇದನ್ನು ನಿಯಮಿತವಾಗಿ ಕೂದಲಿಗೆ  ಹಚ್ಚಿಕೊಳ್ಳುವುದರಿಂದ ಕೂದಲು ಬೆಳೆಯಲು ಸಹಾಯ ಮಾಡುತ್ತದೆ.

4 /5

ಕೂದಲ ರಕ್ಷಣೆಗಾಗಿ ದಾಲ್ಚಿನ್ನಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದು ಕೂದಲಿಗೆ ಹೊಸ ರೂಪವನ್ನು ನೀಡುತ್ತದೆ.   

5 /5

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಕೂದಲು ಉದುರುವುದನ್ನು ತಡೆದು ಕೂದಲು ಬೆಳೆಯಲು ಸಹಾಯ ಮಾಡುತ್ತದೆ.  ಅಲ್ಲದೆ ನೆಲ್ಲಿಕಾಯಿಯ ಎಣ್ಣೆಯನ್ನು ಹಚ್ಚುವುದರಿಂದ ತಲೆಹೊಟ್ಟು ಮತ್ತು ನೆತ್ತಿ ಒಣಗುವ ಸಮಸ್ಯೆ ಬಗೆಹರಿಯುತ್ತದೆ. ಫಂಗಸ್ ಬ್ಯಾಕ್ಟೀರಿಯಾ ಬೆಳೆಯದಂತೆ ತಡೆಯುತ್ತದೆ.