ಒಂದು ಲೋಟ ನೀರಿಗೆ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಎಲೆ ಬೆರೆಸಿ ಸೇವಿಸಿ ಯೂರಿಕ್ ಆಸಿಡ್ ಕರಗುವುದು ! ಸಂಧಿವಾತವೂ ಕಡಿಮೆಯಾಗುವುದು
ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಅನೇಕ ಆಹಾರ ಪದಾರ್ಥಗಳಿವೆ.ಇವುಗಳನ್ನು ಸೇವಿಸುವುದರೊಂದಿಗೆ ಮೂತ್ರದ ಮೂಲಕವೇ ರಕ್ತದಲ್ಲಿರುವ ಯೂರಿಕ್ ಆಸಿಡ್ ಅನ್ನು ಹೊರ ಹಾಕಬಹುದು.
ಪ್ರತಿದಿನ ನಿಂಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ರಕ್ತದಲ್ಲಿನ ಯೂರಿಕ್ ಆಸಿಡ್ ನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ ಸಂಧಿವಾತದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಕೆಲವು ಅಧ್ಯಯನಗಳು ತೋರಿಸಿವೆ.
ನಿಂಬೆ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಕಂಡುಬರುತ್ತವೆ. ಇದು ದೇಹದಲ್ಲಿ ಯೂರಿಕ್ ಆಸಿಡ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ.
ಯೂರಿಕ್ ಆಸಿಡ್ ನಿಯಂತ್ರಿಸಬೇಕಾದರೆ ನಿಂಬೆ ನೀರನ್ನು ಹೀಗೆ ಸೇವಿಸಬೇಕು.ಒಂದು ಲೋಟ ನೀರು, 1 ಟೀಸ್ಪೂನ್ ನಿಂಬೆ ರಸ ಮತ್ತು 5 ರಿಂದ 10 ತುಳಸಿ ಎಲೆಗಳು ಇಲ್ಲಿ ಬೇಕಾಗುತ್ತದೆ.
1 ಕಪ್ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಸುಮಾರು 5 ರಿಂದ 10 ನಿಮಿಷಗಳ ಕಾಲ ಕುದಿಸಿ.ನಂತರ, ಅದನ್ನು ತಣ್ಣಗಾಗಲು ಬಿಡಿ. ನಂತರ ಅದಕ್ಕೆ ಜೇನುತುಪ್ಪ ಮತ್ತು ನಿಂಬೆ ರಸವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ.ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.
ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE KANNADA NEWS ಅದನ್ನು ಅನುಮೋದಿಸುವುದಿಲ್ಲ.