ವರ್ಷ 2024ರಲ್ಲಿ ಈ ಜನರ ಜೀವನದಲ್ಲಿ ಶುಕ್ರದೆಸೆ, ಧನ ಲಕ್ಷ್ಮಿಯ ಕೃಪೆಯಿಂದ ಹಣಗಳಿಕೆಯ ಸುವರ್ಣಕಾಲ ಆರಂಭ!
Shukra Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷ 2024 ಆರಂಭದಲ್ಲಿ ಧನ-ವೈಭವದಾತ ಶುಕ್ರ ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಶುಕ್ರನ ಈ ಮಿತ್ರ ರಾಶಿ ಗೋಚರ 3 ರಾಶಿಗಳ ಜನರ ಜೀವನವನ್ನೇ ಬದಲಾಯಿಸಲಿದೆ. (Spiritual News In Kannada)
ಮಕರ ರಾಶಿ: ಶುಕ್ರ ನಿಮ್ಮ ರಾಶಿಯಲ್ಲಿಯೇ ಗೋಚರಿಸಲಿರುವ ಕಾರಣ, ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಅಪಾರ ಹೊಳಪು ಕಂಡುಬರಲಿದೆ. ಸಂಗಾತಿಯ ಜೊತೆಗಿನ ನಿಮ್ಮ ಸಂಬಂಧ ಸುಮಧುರವಾಗಿರಲಿದೆ, ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುವಿರಿ. ಅವಿವಾಹಿತರಿಗೂ ಕೂಡ ಈ ವರ್ಷದಲ್ಲಿ ಕಂಕಣ ಭಾಗ್ಯ ಕೂಡಿಬರುವ ಸಾಧ್ಯತೆ ಇದೆ. ಶುಕ್ರ ನಿಮ್ಮ ಜಾತಕದ ಪಂಚಮ ಹಾಗೂ ದಶಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಲಾಭ ಸಿಗಲಿದೆ. ಪ್ರೇಮ ಸಂಬಂಧಗಳಲ್ಲಿಯೂ ಕೂಡ ನಿಮಗೆ ಯಶಸ್ಸು ಪ್ರಾಪ್ತಿಯಾಗಲಿದೆ.
ವೃಷಭ ರಾಶಿ: ನಿಮ್ಮ ರಾಶಿಗೂ ಕೂಡ ಶುಕ್ರ ಅಧಿಪತಿಯಾಗಿದ್ದಾನೆ, ಮತ್ತು ಆತ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ದೇಶ-ವಿದೇಶಕ್ಕೆ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆಗಳು ನಿಮ್ಮ ಪಾಲಿಗೆ ಶುಭ ಸಾಬೀತಾಗಲಿವೆ. ನೌಕರ ವರ್ಗದ ಜನರಿಗೆ ಉತ್ತಮ ಅವಕಾಶಗಳು ಪ್ರಾಪ್ತಿಯಾಗಲಿವೆ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ವಿದ್ಯಾರ್ಥಿಗಳ ಪಾಲಿಗೆ ಸಮಯ ಉತ್ತಮವಾಗಿದೆ.
ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಶುಕ್ರನ ಈ ಗೋಚರ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನೌಕರಿಯ ಹುಡುಕಾಟದಲ್ಲಿ ತೊಡಗಿರುವವರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ಪ್ರೇಮ ಸಂಬಂಧದಲ್ಲಿ ನಿಮಗೆ ಯಶಸ್ಸು ದೊರೆತು ನಿಮ್ಮ ಪ್ರೇಮ ವಿವಾಹದಲ್ಲಿ ಬದಲಾಗುವ ಸಾಧ್ಯತೆ ಇದೆ. ಇದಲ್ಲದೆ ಹಣಕಾಸಿನ ವಿಷಯದಲ್ಲಿ ವರ್ಷ ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಆಕಸ್ಮಿಕ ಧನ ಪ್ರಾಪ್ತಿಯಾಗಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಪ್ರೊಫೆಶನಲ್ ಲೈಫ್ ನಲ್ಲಿ ದೊಡ್ಡ ಯಶಸ್ಸು ನಿಮ್ಮದಾಗಲಿದ್ದು, ಕಾರ್ಯಕ್ಷೇತ್ರದಲ್ಲಿ ನಿಮ್ಮ ಹೆಗಲ ಮೇಲೆ ಮಹತ್ವದ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಶುಕ್ರ ನಿಮ್ಮ ಗೋಚರ ಜಾತಕದ ಧನ ಹಾಗೂ ಭಾಗ್ಯ ಸ್ಥಾನದ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ ಮತ್ತು ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)