ಮುಂದಿನ 15 ದಿನ ಈ ರಾಶಿಗೆ ಸೋಲೆಂಬುದೇ ಇಲ್ಲ: ಸಂಪತ್ತಿನ ಮಳೆ ನಿಶ್ಚಿತ-ಪ್ರಗತಿ, ಗೌರವ, ಪ್ರತಿಷ್ಠೆ ಜೊತೆ ಆಯಸ್ಸು ಹೆಚ್ಚಳ

Shukra Uday in Kark 2023: ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹದ ಉದಯ ಮತ್ತು ಅಸ್ತವು ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆಗಸ್ಟ್ 18 ರಂದು ಶುಕ್ರನು ಕರ್ಕ ರಾಶಿಯಲ್ಲಿ ಉದಯಿಸಿದ್ದಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹದ ಉದಯ ಮತ್ತು ಅಸ್ತವು ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಆಗಸ್ಟ್ 18 ರಂದು ಶುಕ್ರನು ಕರ್ಕ ರಾಶಿಯಲ್ಲಿ ಉದಯಿಸಿದ್ದಾನೆ. ಜ್ಯೋತಿಷ್ಯದಲ್ಲಿ ಶುಕ್ರನನ್ನು ಮಂಗಳಕರ ಗ್ರಹವೆಂದು ಪರಿಗಣಿಸಲಾಗಿದೆ.

2 /7

ಶುಕ್ರನ ಉದಯದಿಂದಾಗಿ, ಅನೇಕ ರಾಶಿಯ ಜನರು ಪ್ರೀತಿ ಮತ್ತು ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಐಷಾರಾಮಿ ಬದುಕನ್ನು ಪಡೆಯುತ್ತಾರೆ. ಈ ಸಮಯದಲ್ಲಿ, ಕೆಲವು ರಾಶಿಗಳು ನಿರೀಕ್ಷೆ ಮೀರಿದ ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಈ ಸಮಯದಲ್ಲಿ ಶುಕ್ರನ ಉದಯದಿಂದ ಯಾವ ರಾಶಿಯವರಿಗೆ ಬಂಪರ್ ಲಾಭ ಸಿಗಲಿದೆ ಎಂದು ತಿಳಿಯೋಣ.

3 /7

ಮೇಷ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಕ್ರನು ಕರ್ಕಾಟಕ ರಾಶಿಯಲ್ಲಿ ಸಾಗಿದ್ದಾನೆ. ಈ ಸಮಯದಲ್ಲಿ ಮೇಷ ರಾಶಿಯವರಿಗೆ ತುಂಬಾ ಅನುಕೂಲಕರವಾಗಿರುತ್ತದೆ. ಈ ರಾಶಿಯ ಹತ್ತನೇ ಮನೆಯಲ್ಲಿ ಶುಕ್ರನು ಉದಯಿಸಿದ್ದಾನೆ, ಪರಿಣಾಮವಾಗಿ ಸಂಸಾರದಲ್ಲಿ ನೆಮ್ಮದಿ ಹೆಚ್ಚಾಗಲಿದೆ. ಆಸ್ತಿ ಮತ್ತು ವಾಹನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯಲು ಸಾಧ್ಯವಾಗುತ್ತದೆ. ವೃತ್ತಿಪರ ಜೀವನವೂ ಉತ್ತಮವಾಗಿರುತ್ತದೆ.

4 /7

ಕರ್ಕಾಟಕ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಕ್ರನು ಕರ್ಕಾಟಕದಲ್ಲಿ ಉದಯಿಸಿದ್ದಾನೆ. ಹೀಗಾಗಿ ಈ ರಾಶಿಯ ಜನರು ವಿಶೇಷ ಪ್ರಯೋಜನಗಳನ್ನು ಪಡೆಯುತ್ತಾರೆ. ಕುಟುಂಬದೊಂದಿಗೆ ಸಮಯ ಕಳೆಯುವ ಅವಕಾಶ ದೊರೆಯಲಿದೆ. ಹೂಡಿಕೆಯಿಂದ ಲಾಭವಾಗಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ಈ ಅವಧಿಯಲ್ಲಿ ಉದ್ಯೋಗಿಗಳು ಬಡ್ತಿ ಮತ್ತು ಇನ್ಕ್ರಿಮೆಂಟ್ ಪಡೆಯಬಹುದು.

5 /7

ಕನ್ಯಾ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಸಮಯವು ಕನ್ಯಾ ರಾಶಿಯವರಿಗೆ ತುಂಬಾ ಮಂಗಳಕರ ಮತ್ತು ಫಲಪ್ರದವಾಗಲಿದೆ. ಈ ರಾಶಿಯ ಹನ್ನೊಂದನೇ ಮನೆಯಲ್ಲಿ ಶುಕ್ರನು ಉದಯಿಸಿದ್ದಾನೆ. ಹೀಗಾಗಿ ಈ ಜನರು ದಿಢೀರ್ ಸಂಪತ್ತಿನ ಒಡೆಯರಾಗತ್ತಾರೆ. ವೈವಾಹಿಕ ಜೀವನದಲ್ಲಿ ಸಂತೋಷ ಮಾತ್ರ ಇರುತ್ತದೆ. ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ.

6 /7

ಕುಂಭ ರಾಶಿ: ಈ ರಾಶಿಯ ಆರನೇ ಮನೆಯಲ್ಲಿ ಶುಕ್ರನು ಉದಯಿಸಲಿದ್ದಾನೆ. ಹೀಗಾಗಿ ಈ ಜನರು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಪೋಷಕರ ಸಂಪೂರ್ಣ ಬೆಂಬಲ ಸಿಗಲಿದೆ. ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ಆಸ್ತಿ, ವಾಹನ ಮತ್ತು ಮನೆ ಖರೀದಿಯ ಕನಸು ಶೀಘ್ರದಲ್ಲೇ ಈಡೇರುತ್ತದೆ. ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ.

7 /7

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)