Shukra Gochar: ಕೆಲವೇ ಗಂಟೆಗಳಲ್ಲಿ ಸ್ವರಾಶಿಗೆ ವೈಭವದಾತನ ಎಂಟ್ರಿ, ಮಾಲವ್ಯ ರಾಜಯೋಗದಿಂದ 3 ರಾಶಿಗಳ ಜನರಿಗೆ ಅಪಾರ ಧನಲಾಭ!

Wed, 05 Apr 2023-6:55 pm,

ವೃಷಭ ರಾಶಿ: ನಿಮ್ಮ ಜನರ ಪಾಲಿಗೆ ಮಾಲವ್ಯ ರಾಜಯೋಗ ಅತ್ಯಂತ ಶುಭ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಈ ಯೋಗ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೌಟುಂಬಿಕ ಸುಖ-ಸೌಖ್ಯ ಪ್ರಾಪ್ತಿಯಾಗಲಿದೆ. ಇದಲ್ಲದೆ ಬಂಧು-ಮಿತ್ರರ ಬೆಂಬಲ ಕೂಡ ನಿಮಗಿರಲಿದೆ. ನಿಮಗೆ ಯಶಸ್ಸು, ಕೀರ್ತಿ ಪಾಪ್ತಿಯಾಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿ ಭಾರಿ ಆಕರ್ಷಣೆ ಕಂಡು ಬರಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಬಾಳ ಸಂಗಾತಿಯ ಬೆಂಬಲ ಸಿಗಲಿದೆ. ಪ್ರತಿಷ್ಠಿತ ವ್ಯಕ್ತಿಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ. ಇನ್ನೊಂದೆಡೆ ನಿಮ್ಮ ಗೋಚರ ಜಾತಕದಲ್ಲಿ ಶನಿ ದೇವ ಶಶ ಮಹಾಯೋಗ ಕೂಡ ರೂಪುಗೊಂಡಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯ ಕೂಡ ಹೆಚ್ಚಾಗಲಿದೆ. ಅನಾವಶ್ಯಕ ವೆಚ್ಚ ತಪ್ಪಿಸಲು ಪ್ರಯತ್ನಿಸಿ.   

ವೃಶ್ಚಿಕ ರಾಶಿ: ನಿಮ್ಮ ಪಾಲಿಗೆ ಮಾಲವ್ಯ ರಾಜಯೋಗ ಲಾಭದಾಯಕ ಸಿದ್ಧವಾಗಲಿದೆ. ಏಕೆಂದರೆ ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ಈ ಮಾಲವ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಇನ್ನೊಂದೆಡೆ ನಿಮ್ಮ ಜಾತಕದ ಚತುರ್ಥ ಭಾವದಲ್ಲಿ ಶಶ ರಾಜಯೋಗ ರೂಪಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭವಾಗುವ ಸಾಧ್ಯತೆಗಳಿವೆ. ಈ ಅವಧಿಯಲ್ಲಿ ನಿಮಗೆ ಯಾತ್ರೆಗಳಿಂದ ಲಾಭ ಸಿಗುವ ಸಾಧ್ಯತೆ ಇದೆ. ಹೊಸ ವ್ಯಾಪಾರ ಒಪ್ಪಂದಗಳು ಕುದುರುವ ಸಾಧ್ಯತೆ ಇದೆ. ಅನಾರೋಗ್ಯದಿಂದ ಬಳಲುತ್ತಿದ್ದರೆ, ಅದರಿಂದ ಮುಕ್ತಿ ಸಿಗಲಿದೆ. ಸಹೋದರ ಸಹೋದರಿಯರ ಬೆಂಬಲ ನಿಮಗೆ ಸಿಗಲಿದೆ. ನಿಮ್ಮ ಘನತೆ-ಗೌರವ, ಪ್ರತಿಷ್ಠೆ ಹೆಚ್ಚಾಗಲಿದೆ. ರಾಜಕೀಯದ ಜೊತೆಗೆ ಸಂಬಂಧ ಹೊಂದಿದವರಿಗೆ ಈ ಅವಧಿಯಲ್ಲಿ ಸ್ಥಾನಮಾನ ಲಭಿಸುವ ಸಾಧ್ಯತೆ ಇದೆ.   

ಸಿಂಹ ರಾಶಿ: ಮಾಲವ್ಯ ರಾಜಯೋಗ ಸಿಂಹ ರಾಶಿಯ ಜಾತಕದವರ ಪಾಲಿಗೆ ಸಾಕಷ್ಟು ಲಾಭಪ್ರದ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ಕರ್ಮ ಭಾವದ ಮೇಲೆ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ ಮತ್ತು ವ್ಯವಹಾರಗಳಲ್ಲಿ ಅಪಾರ ಯಶಸ್ಸು ಸಿಗುವ ಎಲ್ಲಾ ಸಾಧ್ಯತೆಗಳಿವೆ. ನೌಕರಿ ಹಾಗೂ ವ್ಯಾಪಾರ ಮಾಡುವವರ ಸ್ಥಿತಿಯಲ್ಲಿ ಅಪಾರ ಸುಧಾರಣೆಯನ್ನು ನೀವು ಗಮನಿಸುವಿರಿ ಹಾಗೂ ಕಾರ್ಯಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಈ ಅವಧಿಯಲ್ಲಿ ಉದ್ಯೋಗ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ಶನಿ ಮಹಾರಾಜ ನಿಮ್ಮ ಗೋಚರ ಜಾಟದದಲ್ಲಿ ಶಶ ಮಹಾ ಯೋಗ ನಿರ್ಮಿಸಿ ವಿರಾಜಮಾನನಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿಯ ಅಭಿವೃದ್ಧಿಯನ್ನು ನೀವು ನೋಡಬಹುದಾಗಿದೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭವಾಗುವ ಸಾಧ್ಯತೆ ಇದೆ. ಯಾವುದಾದರೊಂದು ಹೊಸ ಒಪ್ಪಂದ ಅಂತಿಮಗೊಳ್ಳುವ ನಿರೀಕ್ಷೆ ಇದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link