ಶೀಘ್ರದಲ್ಲಿಯೇ ಸ್ವರಾಶಿಗೆ ಧನದಾತನ ಆಗಮನ, ಲಕ್ಷ್ಮಿ ಕೃಪೆಯಿಂದ ಈ ರಾಶಿಗಳ ಜನರ ಜೀವನದಲ್ಲಿ ಶುಕ್ರದೆಸೆ ಆರಂಭ!
Venus Transit In Tula: ಜೋತಿಷ್ಯ ಶಾಸ್ತ್ರದ ಪ್ರಕಾರ ವೈಭವ ಹಾಗೂ ಐಶ್ವರ್ಯ ಕಾರಕನಾಗಿರುವ ಶುಕ್ರ ಶೀಘ್ರದಲ್ಲಿಯೇ ತನ್ನ ಸ್ವರಾಶಿಯಾಗಿರುವ ತುಲಾ ರಾಶಿಗೆ ಆಗಮಿಸಲಿದ್ದಾನೆ. ಹೀಗಾಗಿ ಲಕ್ಷ್ಮಿ ಕೃಪೆಯಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಶುಕ್ರದೆಸೆ ಆರಂಭಗೊಳ್ಳಲಿದೆ. (Spiritual News In Kannada)
ತುಲಾ ರಾಶಿ: ತುಲಾ ರಾಶಿಗೆ ಶುಕ್ರ ಅಧಿಪತಿ, ನಿಮ್ಮ ರಾಶಿಗೆ ಶುಕ್ರ ಆಗಮಿಸಲಿದ್ದಾನೆ. ಶುಕ್ರನ ಈ ಗೋಚರ ನಿಮ್ಮ ಜಾತಕದ ಲಗ್ನ ಭಾವದಲ್ಲಿ ನೆರವೇರಲಿದೆ. ಇದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಅಪಾರ ಹೊಳಪು ಕಂಡು ಬರಲಿದೆ. ಅರ್ಥಾತ್ ನಿಮ್ಮ ವ್ಯಕ್ತಿತ್ವ ಹೆಚ್ಚು ಆಕರ್ಷಕವಾಗಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಅದ್ಭುತವಾಗಿರಲಿದೆ. ವ್ಯಾಪಾರ ವರ್ಗದ ಜನರಿಗೆ ಈ ಸಮಯ ಅತ್ಯಂತ ಆಹ್ಲಾದಕರವಾಗಿರಲಿದೆ. ವೈವಾಹಿಕ ಜೀವನ ಕೂಡ ಸುಖದಿಂದ ಕೂಡಿರಲಿದೆ. ಪಾರ್ಟ್ನರ್ಶಿಪ್ ಕೆಲಸದಲ್ಲಿ ಲಾಭದ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ನಿಮ್ಮ ಜಾತಕದ ಎಂಟನೇ ಮನೆಗೆ ಶುಕ್ರ ಅಧಿಪತಿ. ಹೀಗಾಗಿ ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಉತ್ತಮ ಲಾಭ ಸಿಗಲಿದೆ.
ಮಿಥುನ ರಾಶಿ: ಶುಕ್ರ ನಿಮ್ಮ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ನಿಮಗೆ ಮಕ್ಕಳಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಸಿಗುವ ಎಲ್ಲಾ ಲಕ್ಷಣಗಳಿವೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಅದ್ಭುತವಾಗಿರಲಿದೆ. ವ್ಯಾಪಾರ ವರ್ಗದ ಜನರಿಗೆ ಈ ಸಮಯ ಸಾಕಷ್ಟು ಅನುಕೂಲಕರವಾಗಿರಲಿದೆ. ಪ್ರೇಮ ಸಂಬಂಧ ವಿವಾಹ ರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಶುಕ್ರ ನಿಮ್ಮ ಜಾತಕದ ದ್ವಾದಶ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನೀವು ಹಣ ಕೂಡಿಹಾಕುವಲ್ಲಿ ಯಶಸ್ಸನ್ನು ಸಂಪಾದಿಸುವಿರಿ. ಕಾಲಕಾಲಕ್ಕೆ ನಿಮಗೆ ಆಕಸ್ಮಿಕ ಧನಲಾಭ ಯೋಗದ ಸಂಕೇತಗಳು ಕೂಡ ಗೋಚರಿಸುತ್ತಿವೆ. ನಿಮ್ಮ ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಮಕರ ರಾಶಿ: ಶುಕ್ರ ನಿಮ್ಮ ರಾಶಿಯ ಅಧಿಪತಿಯಾಗಿರುವ ಶನಿಯ ಮಿತ್ರನಾಗಿದ್ದಾನೆ. ಜೊತೆಗೆ ಆತ ನಿಮ್ಮ ಗೋಚರ ಜಾತಕದ ವೃತ್ತಿ ಹಾಗೂ ವ್ಯಾಪಾರ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ವೃತ್ತಿ ಜೀವನದ ವಿಷಯದಲ್ಲಿ ಹೇಳುವುದಾದರೆ, ಈ ಅವಧಿಯಲ್ಲಿ ನಿಮಗೆ ಅಪಾರ ಸಂತುಷ್ಟಿ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳ ಪಾಲಿಗೆ ಈ ಅವಧಿಯಲ್ಲಿ ಒಂದು ವಿಶೇಷ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ. ಚಿತ್ರೋದ್ಯಮ, ಮಾಡೆಲಿಂಗ್, ಫ್ಯಾಶನ್, ಡಿಸೈನಿಂಗ್, ಕಲೆ ಹಾಗೂ ಸಂಗೀತ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ವಿಶೇಷ ಲಾಭ ಸಿಗಲಿದೆ. ಶುಕ್ರ ನಿಮ್ಮ ಜಾತಕದ ಚತುರ್ಥ ಭಾವಕ್ಕೆ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)