ಕ್ರಿಕೆಟ್ ಜಗತ್ತಿಗೆ ವಿರಾಟ್ ಪ್ರಿಯ.. ಆದ್ರೆ ವಿರಾಟ್’ಗೆ ಈ ಕ್ರಿಕೆಟರ್ ಅಂದ್ರೆ ಪಂಚ್ರಪ್ರಾಣ! ಆ ದಿಗ್ಗಜ ಯಾರು ಗೊತ್ತಾ?
ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಆರಾಧ್ಯ ದೈವ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಆದರೆ ನಾವಿಂದು ಕೊಹ್ಲಿಗೆ ನೆಚ್ಚಿನ ಕ್ರಿಕೆಟಿಗ ಯಾರು ಎಂಬುದನ್ನು ತಿಳಿಸಿಕೊಡಲಿದ್ದೇವೆ.
ಇಂಗ್ಲೆಂಡ್ ಆಲ್’ರೌಂಡರ್ ಮತ್ತು ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ತಮ್ಮ ನೆಚ್ಚಿನ ಕ್ರಿಕೆಟಿಗ ಎಂದು ಕಿಂಗ್ ಕೊಹ್ಲಿ ಬಣ್ಣಿಸಿದ್ದಾರೆ,
ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಆರಾಧ್ಯ ದೈವ. ಆದರೆ ತಮ್ಮ ನೆಚ್ಚಿನ ಕ್ರಿಕೆಟಿಗ ಪ್ರಸ್ತುತ ಕಾಲಘಟ್ಟದಲ್ಲಿ ಬೆನ್ ಸ್ಟೋಕ್ಸ್ ಎಂದಿದ್ದಾರೆ.
ವಿರಾಟ್ ಕೊಹ್ಲಿ ಸದ್ಯ ಟಿ20 ವಿಶ್ವಕಪ್’ನಲ್ಲಿ ಭಾರತ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ. ಇದುವರೆಗೆ ಎರಡು ಪಂದ್ಯಗಳು ನಡೆದಿದ್ದು, ಇದರಲ್ಲಿ ಹೇಳಿಕೊಳ್ಳುವಂತಹ ಸಾಧನೆ ಏನೂ ಮಾಡಿಲ್ಲ.
ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ವಿರಾಟ್ ಮೇಲೆ ಅಭಿಮಾನಿಗಳು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಇದುವರೆಗೆ ಅದನ್ನು ಪೂರ್ಣಗೊಳಿಸುವಲ್ಲಿ ವಿರಾಟ್ ವಿಫಲರಾಗಿದ್ದಾರೆ.