ಭಾರತದ ಚುನಾವಣಾ ಆಯೋಗ (EC) ಆಗಸ್ಟ್ 1ರಿಂದ ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡುವ ಅಭಿಯಾನಕ್ಕೆ ಚಾಲನೆ ನೀಡಿತು.
ನವದೆಹಲಿ: ಭಾರತದ ಚುನಾವಣಾ ಆಯೋಗ (EC) ಆಗಸ್ಟ್ 1ರಿಂದ ಹಲವಾರು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡುವ ಅಭಿಯಾನಕ್ಕೆ ಚಾಲನೆ ನೀಡಿತು. ಮತದಾರರ ಗುರುತು ಸ್ಥಾಪಿಸಲು & ಮತದಾರರ ಪಟ್ಟಿಯಲ್ಲಿನ ನಮೂದುಗಳ ದೃಢೀಕರಣ ಮತ್ತು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಅಥವಾ ಒಂದೇ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಒಂದೇ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಮತದಾರರ ಗುರುತಿನ ಚೀಟಿಗಳನ್ನು ಆಧಾರ್ ಕಾರ್ಡ್ಗಳೊಂದಿಗೆ ಲಿಂಕ್ ಮಾಡಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಸ್ವಯಂಪ್ರೇರಿತವಾಗಿರುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ ಮತ್ತು ಮತದಾರರು ತಮ್ಮ ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡದಿರಲು ಸಾಕಷ್ಟು ಕಾರಣ ನೀಡಬೇಕು. ಮತದಾರರ ಗುರುತಿನ ಚೀಟಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಲಿಂಕ್ ಮಾಡುವುದು ಐಚ್ಛಿಕವಾಗಿರುತ್ತದೆ ಮತ್ತು ಮತದಾರರು ಅದನ್ನು ಲಿಂಕ್ ಮಾಡದಿರಲು ಸಾಕಷ್ಟು ಕಾರಣವನ್ನು ಹೊಂದಿರಬೇಕು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.
ಮತದಾರರ ಗುರುತಿನ ಚೀಟಿಯೊಂದಿಗೆ ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಇಚ್ಛಿಸುವ ಜನರು ಹೊಸ ಫಾರ್ಮ್ 6B ಅನ್ನು ಭರ್ತಿ ಮಾಡುವ ಮೂಲಕ ಮಾಡಬಹುದು. ಮತದಾರರ ಆಧಾರ್ ಸಂಖ್ಯೆಯನ್ನು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಸಲ್ಲಿಸಬಹುದು.
ಚುನಾವಣಾ ದಾಖಲೆಯಲ್ಲಿ ಹೆಸರು ಕಂಡುಬರುವ ಪ್ರತಿಯೊಬ್ಬ ವ್ಯಕ್ತಿಯು ತನ್ನ ಆಧಾರ್ ಸಂಖ್ಯೆಯೊಂದಿಗೆ ಚುನಾವಣಾ ನೋಂದಣಿ ಅಧಿಕಾರಿಗೆ ನಮೂನೆ 6Bಯನ್ನು ಸಲ್ಲಿಸಬಹುದು.
ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ voterportal.eci.gov.in ಗೆ ಭೇಟಿ ನೀಡಿ ನಿಮ್ಮ ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ವೋಟರ್ ಐಡಿ ಸಂಖ್ಯೆಯನ್ನು ಬಳಸಿ ಪೋರ್ಟಲ್ಗೆ ಲಾಗಿನ್ ಮಾಡಿ ನಿಮ್ಮ ರಾಜ್ಯ, ಜಿಲ್ಲೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ನಮೂದಿಸಿ - ಹೆಸರು, ಹುಟ್ಟಿದ ದಿನಾಂಕ ಮತ್ತು ತಂದೆಯ ಹೆಸರು Search Button ಕ್ಲಿಕ್ ಮಾಡಿ ನಿಮ್ಮ ವಿವರಗಳು ಸರ್ಕಾರದ ಡೇಟಾಬೇಸ್ಗೆ ಹೊಂದಿಕೆಯಾಗಿ ನಂತರ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತದೆ ಸ್ಕ್ರೀನ್ನ ಎಡಭಾಗದಲ್ಲಿರುವ ‘Feed Aadhaar No’ ಆಯ್ಕೆಯನ್ನು ಕ್ಲಿಕ್ ಮಾಡಿ ಒಂದು Pop-up Page ಕಾಣಿಸುತ್ತದೆ ಈಗ ಆಧಾರ್ ಕಾರ್ಡ್, ಆಧಾರ್ ಸಂಖ್ಯೆ, ಮತದಾರರ ಗುರುತಿನ ಸಂಖ್ಯೆ, ನೋಂದಾಯಿತ ಮೊಬೈಲ್ ಸಂಖ್ಯೆ ಅಥವಾ ನೋಂದಾಯಿತ ಇಮೇಲ್ ವಿಳಾಸದಲ್ಲಿ ಹೆಸರು ಭರ್ತಿ ಮಾಡಿ. ನಿಮ್ಮ ವಿವರಗಳನ್ನು ಪರಿಶೀಲಿಸಿ ಮತ್ತು 'Submit' ಕ್ಲಿಕ್ ಮಾಡಿ. ಈಗ ನಿಮಗೆ ಅಪ್ಲಿಕೇಶನ್ ಅನ್ನು ಯಶಸ್ವಿಯಾಗಿ ನೋಂದಾಯಿಸಲಾಗಿದೆ ಎಂಬ ಸಂದೇಶವು ಕಾಣಿಸಿಕೊಳ್ಳುತ್ತದೆ.