Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟ.. ಮೈಕೊರೆಯುವ ಚಳಿ ಆರಂಭ!
ಇಂದು ಎಲ್ಲೆಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ? ಚಳಿ ಎಲ್ಲಿರಲಿದೆ? ಕರ್ನಾಟಕದ ಹವಾಮಾನ ವರದಿ ಈ ಸುದ್ದಿಯಲ್ಲಿದೆ.
ಈಶಾನ್ಯ ಮಾನ್ಸೂನ್ ಮರಳಿದ ಕಾರಣ ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮತ್ತೊಂದೆಡೆ ನಿಧಾನವಾಗಿ ಚಳಿಯೂ ಆವರಿಸುತ್ತಿದೆ.
IMD ವೆಬ್‌ಸೈಟ್ ಪ್ರಕಾರ, ಉತ್ತರ ಭಾರತದಾದ್ಯಂತ ದಟ್ಟವಾದ ಮಂಜು ಮುಸಕಲಿದೆ ಎಂದು ಹೇಳಲಾಗಿದೆ.
ಹವಾಮಾನ ಇಲಾಖೆ ಪ್ರಕಾರ, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇರುವ ಸಾಧ್ಯತೆಯಿದೆ.
ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ದಟ್ಟವಾದ ಮಂಜಿನಿಂದಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ಕೆಲವೆಡೆ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಂಧ್ರಪ್ರದೇಶ, ಕರ್ನಾಟಕ, ಲಕ್ಷದ್ವೀಪ ಮತ್ತು ದಕ್ಷಿಣ ತೆಲಂಗಾಣದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.