Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ವಾರ ರಣಭೀಕರ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟದ ಎಚ್ಚರಿಕೆ!
ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ? ಚಳಿ ಎಲ್ಲಿರಲಿದೆ? ಎಂಬ ಕಂಪ್ಲೀಟ್ ಹವಾಮಾನ ವರದಿ ಈ ಸುದ್ದಿಯಲ್ಲಿದೆ.
ಕರ್ನಾಟಕದಲ್ಲಿ ಹಿಂಗಾರು ಅವಧಿ ಮುಕ್ತಾಯವಾಗಿ ಚಳಿಗಾಲ ಪ್ರಾರಂಭ ಆಗಿದೆ. ಆದರೂ ರಾಜ್ಯದ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ತಿಂಗಳು ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 18 ರಂದು ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ನವೆಂಬರ್ 25ರ ವರೆಗೆ ಹಾಗೂ ಅಲ್ಲಿಂದ ಡಿಸೆಂಬರ್ 3ರ ವರೆಗೂ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಒಳ ಕರ್ನಾಟಕ, ದಕ್ಷಿಣ ಒಳ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿಯಲಿದ್ದು ಮೈಕೊರೆಯುವ ಚಳಿ ಬಿಡಲಿದೆ.
ಬೆಂಗಳೂರಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.