Weight Loss: ತೂಕ ಇಳಿಕೆಗೆ ಈ ರೀತಿ ಸೋರೆಕಾಯಿಯನ್ನು ಸೇವಿಸಿ!
1. ಸೋರೆಕಾಯಿ ನೀರು ತೂಕವನ್ನು ಇಳಿಕೆ ಮಾಡಲು ಸಹಾಯ ಮಾಡುತ್ತದೆ. ಏಕೆಂದರೆ ಇದನ್ನು ತಿನ್ನುವುದರಿಂದ ದೇಹವು ನೈಸರ್ಗಿಕವಾಗಿ ಡಿಟಾಕ್ಸ್ ಆಗುತ್ತದೆ. ಅದಕ್ಕಾಗಿಯೇ ನೀವು ಪ್ರತಿದಿನ ಸೋರೆಕಾಯಿ ನೀರನ್ನು ಕುಡಿಯಬಹುದು.
2. ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತೂಕ ಕಡಿಮೆ ಮಾಡಿಕೊಳ್ಳಲು ಸೋರೆಕಾಯಿ ತರಕಾರಿಯನ್ನು ಖಂಡಿತವಾಗಿ ಸೇವಿಸಿ. ಇದು ಹಸಿವನ್ನು ಕಡಿಮೆ ಮಾಡುವ ಫೈಬರ್ ಅನ್ನು ಹೊಂದಿರುತ್ತದೆ. ಈ ಕಾರಣದಿಂದಾಗಿ ನೀವು ಅತಿಯಾಗಿ ತಿನ್ನುವುದರಿಂದ ಪಾರಾಗುವಿರಿ.
3. ಸೋರೆಕಾಯಿ ಸೂಪ್ ತೂಕ ಕಡಿಮೆ ಮಾಡಲು ಸಹಕಾರಿಯಾಗಿದೆ. ಅಷ್ಟೇ ಯಾಕೆ ಇದನ್ನು ತಯಾರಿಸುವುದು ಕೂಡ ತುಂಬಾ ಸುಲಭವಾಗಿದೆ. ಇದನ್ನು ಮಾಡಲು, ಸೋರೆಕಾಯಿಯನ್ನು ನೀರಿನಲ್ಲಿ ಕುದಿಸಿ ಮತ್ತು ಸೂಪ್ ಮಾಡಿ ಸೇವಿಸಿದರೆ, ಇದು ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
4. ಅನೇಕ ಜನರು ಸೋರೆಕಾಯಿಯನ್ನು ತಿಂದ ನಂತರ ಅದರ ಸಿಪ್ಪೆಯನ್ನು ಎಸೆಯುತ್ತಾರೆ, ಆದರೆ ಸೋರೆಕಾಯಿ ಸಿಪ್ಪೆಗಳು ಕೂಡ ನಿಮ್ಮ ತೂಕವನ್ನು ಇಳಿಕೆ ಮಾಡಲು ಸಹಾಯ ಮಾಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಏಕೆಂದರೆ ಇದರಲ್ಲಿ ಹೇರಳ ಪ್ರಮಾಣದಲ್ಲಿ ನಾರಿನಂಶವಿದೆ.
5. ಸೋರೆಕಾಯಿ ಜ್ಯೂಸ್ ದೇಹಕ್ಕೆ ತುಂಬಾ ಒಳ್ಳೆಯದು. ಏಕೆಂದರೆ ಸೋರೆಕಾಯಿಯ ರಸವು ನಿಮ್ಮ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ಮತ್ತು ಅದನ್ನು ಸೇವಿಸುವ ಮೂಲಕ ನಿಮ್ಮ ತೂಕವನ್ನು ನೀವು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)