ಅಡುಗೆ ಮನೆಯ ಈ ವಸ್ತುಗಳನ್ನು ಬಳಸಿ ತೂಕ ಕಡಿಮೆ ಮಾಡಿಕೊಳ್ಳಿ
ತೂಕವನ್ನು ಕಡಿಮೆ ಮಾಡಲು ಸಾಸಿವೆ ಎಣ್ಣೆಯನ್ನು ಬಳಸಬೇಕು. ಏಕೆಂದರೆ ಸಾಸಿವೆ ಎಣ್ಣೆಯು ಇತರ ಎಣ್ಣೆಗಳಿಗಿಂತ ಕಡಿಮೆ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಅರಿಶಿನವು ಕೊಬ್ಬನ್ನು ಸುಡುವ ಗುಣಗಳನ್ನು ಹೊಂದಿದೆ. ಇದು ದೇಹದಲ್ಲಿನ ಕೊಬ್ಬನ್ನು ಕರಗಿಸಲು ಅತ್ತು ಅದನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದಾಗಿ ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದಿಲ್ಲ.
ಬೆಳ್ಳುಳ್ಳಿಯ ಸೇವನೆಯು ದೇಹಕ್ಕೆ ಎಲ್ಲಾ ರೀತಿಯಿಂದಲೂ ಪ್ರಯೋಜನಕಾರಿಯಾಗಿದೆ. ಬೆಳ್ಳುಳ್ಳಿಯನ್ನು ಸೇವಿಸುವುದರಿಂದ, ದಿನವಿಡೀ ಹೊಟ್ಟೆ ತುಂಬಿದ ಭಾಸವಾಗುತ್ತದೆ. ಇದರಿಂದಾಗಿ ಹಸಿವು ಕಡಿಮೆಯಾಗುತ್ತದೆ. ತೂಕವೂ ಕಡಿಮೆಯಾಗುತ್ತದೆ.
ಮಜ್ಜಿಗೆ ತೂಕ ಕಡಿಮೆ ಮಾಡಲು ತುಂಬಾ ಸಹಕಾರಿ. ಪ್ರತಿದಿನ ಮಜ್ಜಿಗೆಯನ್ನು ಸೇವಿಸುವುದರಿಂದ ತೂಕವನ್ನು ಸುಲಭವಾಗಿ ಕಡಿಮೆ ಮಾಡಬಹುದು.
ಜೇನುತುಪ್ಪವು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಏಕೆಂದರೆ ಇದರಲ್ಲಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಪ್ರಮುಖ ಖನಿಜಗಳು ಮತ್ತು ಜೀವಸತ್ವಗಳು ಕಂಡುಬರುತ್ತವೆ. ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)