ಖಾಲಿ ಹೊಟ್ಟೆಯಲ್ಲಿ ಈ ಎಲೆ ತಿಂದರೆ ಮಧುಮೇಹ, ಹೃದಯ ಸಮಸ್ಯೆ ದೂರ..!
ಆಹಾರಕ್ಕೆ ಪರಿಮಳ ಬರಲಿ, ಮಕ್ಕಳ ಆರೋಗ್ಯ ಗಟ್ಟಿಯಾಗಿರಲಿ ಅಂತ ಅಮ್ಮ ಅಡುಗೆಗೆ ಕರಿಬೇವಿನ ಎಲೆಗಳನ್ನ ಹಾಕುತ್ತಾರೆ.. ನಾವು ಅದನ್ನು ಅಜಾಗರೂಕತೆಯಿಂದ ಊಟದಿಂದ ತೆಗೆದು ಪಕ್ಕಕ್ಕೆ ಇಡುತ್ತೇವೆ. ಆದರೆ ನೀವು ಈ ಸುದ್ದಿಯನ್ನ ಓದಿದ ಮೇಲೆ ಎಂದಿಗೂ ಈ ತಪ್ಪನ್ನ ಮಾಡುವುದಿಲ್ಲ..
ಕರಿಬೇವಿನ ಎಲೆಗಳ ಪ್ರಯೋಜನಗಳ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಈ ಎಲೆಗಳನ್ನು ಅನೇಕ ಕಾಯಿಲೆಗಳಿಗೆ ಪರಿಹಾರವಾಗಿ ಬಳಸಬಹುದು. ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆಯುರ್ವೇದದಲ್ಲಿ ಕರಿಬೇವಿನ ಎಲೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.
ಆಹಾರಕ್ಕೆ ಸುವಾಸನೆ ಮತ್ತು ಪರಿಮಳವನ್ನು ತರುವ ಕರಿಬೇವಿನ ಎಲೆಗಳು ದಕ್ಷಿಣ ಭಾರತದ ಅಡುಗೆಗಳಲ್ಲಿ ಅತ್ಯಗತ್ಯ ಅಂಶ. ಕರಿಬೇವಿನ ಎಲೆ ಇಲ್ಲದ ಆಹಾರ ರುಚಿಕರವಾಗಿರುವುದಿಲ್ಲ. ಇದಕ್ಕೆ ಕಾರಣ ಈ ಎಲೆಯಲ್ಲಿ ಅಸಂಖ್ಯಾತ ಪೋಷಕಾಂಶಗಳಿವೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು, ಬೀಟಾ-ಕ್ಯಾರೋಟಿನ್, ವಿಟಮಿನ್ ಸಿ ರೋಗಗಳಿಂದ ನಮ್ಮನ್ನು ಸುರಕ್ಷಿತವಾಗಿರಿಸುತ್ತವೆ.
ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ : ಮಧುಮೇಹವನ್ನು ನಿಯಂತ್ರಿಸುವಲ್ಲಿ ಕರಿಬೇವಿನ ಎಲೆಗಳು ಪರಿಣಾಮಕಾರಿ. ಅತಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಕರಿಬೇವಿನ ಎಲೆಗಳು ಇನ್ಸುಲಿನ್ ಸ್ರವಿಸುವಿಕೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದರಲ್ಲಿ ನಾರಿನಂಶ ಹೆಚ್ಚಿರುವುದರಿಂದ ಬೆಳವಣಿಗೆಯನ್ನು ಸುಧಾರಿಸುತ್ತದೆ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.
ಜೀರ್ಣಕಾರಿ ಸಮಸ್ಯೆ ನಿವಾರಣೆ : ಗ್ಯಾಸ್ ಮತ್ತು ಎದೆಯುರಿ ಮುಂತಾದ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಕರುಳು ಆರೋಗ್ಯವಾಗಿರುತ್ತದೆ.
ಹೃದಯದ ಆರೋಗ್ಯ : ಕರಿಬೇವಿನ ಎಲೆಗಳಲ್ಲಿರುವ ಫೈಬರ್ ಕೆಟ್ಟ LDL ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ಪೊಟ್ಯಾಸಿಯಮ್ ಕೂಡ ಸಮೃದ್ಧವಾಗಿದೆ, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಳ : ಕರಿಬೇವಿನ ಎಲೆಯಲ್ಲಿ ಆ್ಯಂಟಿ ಫಂಗಲ್ ಗುಣಲಕ್ಷಣಗಳು, ಬ್ಯಾಕ್ಟೀರಿಯಾ ವಿರೋಧಿ ಗುಣಗಳು, ಆ್ಯಂಟಿ ಆಕ್ಸಿಡೆಂಟ್‌ಗಳು ಇತ್ಯಾದಿಗಳು ಹೇರಳವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಫ್ರೀ ರ್ಯಾಡಿಕಲ್ಸ್ ರೋಗಗಳ ವಿರುದ್ಧ ಹೋರಾಡಲು ಸಹ ಸಹಾಯ ಮಾಡುತ್ತದೆ.
ಕಣ್ಣಿನ ಆರೋಗ್ಯ ಸುಧಾರಣೆ : ಕರಿಬೇವಿನ ಎಲೆಯಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ತ್ವಚೆಯ ಆರೋಗ್ಯ ಚೆನ್ನಾಗಿರುತ್ತದೆ. ಇದರಲ್ಲಿರುವ ಬೀಟಾ-ಕ್ಯಾರೋಟಿನ್ ಕಣ್ಣಿನ ಸಮಸ್ಯೆಗಳನ್ನು ಮತ್ತು ಕಣ್ಣಿನ ಪೊರೆಗಳನ್ನು ತಡೆಯುವ ಮೂಲಕ ಕಣ್ಣುಗಳನ್ನು ರಕ್ಷಿಸುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಈ ಮಾಹಿತಿಗೆ ಜವಾಬ್ದಾರನಾಗಿರುವುದಿಲ್ಲ.)