ಮೈಸೂರಿನಲ್ಲಿ `ಅನ್ನ` ಸಿನಿಮಾ ನೋಡಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Sat, 21 Sep 2024-12:10 pm,

ಮನೋರಂಜನೆಯ ಜೊತೆಗೆ ಹಸಿವಿನ ಎದುರು ಬೇರೆಲ್ಲಾ ಸಂಬಂಧಗಳು ಹೇಗೆ ನಗಣ್ಯವೆನಿಸುತ್ತವೆ ಎಂಬ ಸಂದೇಶವನ್ನು ಒಳಗೊಂಡ ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸುತ್ತೇನೆ ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.

ನಾನು ಕಂಡ ಹಸಿವು, ಬಡತನಗಳು ನಾಡಿನ ಯಾರೊಬ್ಬರನ್ನೂ ಬಾಧಿಸದಿರಲಿ ಎಂದು 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಕೊಟ್ಟಿದ್ದೆ, ಚಿತ್ರದ ಕೊನೆಯಲ್ಲಿ ಈ ಯೋಜನೆಯ ಮಹತ್ವದ ಬಗ್ಗೆಯೂ ಸಿನೆಮಾ ಬೆಳಕು ಚೆಲ್ಲಿದೆ.

 

ಅನ್ನ ಉಣ್ಣಲು ನನ್ನೂರಿನ ಜನ ಹಬ್ಬಕ್ಕಾಗಿ ಕಾಯುತ್ತಿದ್ದ ನನ್ನ ಬಾಲ್ಯದ ದಿನಗಳು ಈ ಸಿನಿಮಾದ ಕಥೆಯ ಮೂಲಕ ಕಣ್ಣೆದುರು ಬಂದವು.

ನಿನ್ನೆ ಮೈಸೂರಿನ ಡಿ.ಆರ್.ಸಿ ಚಿತ್ರಮಂದಿರದಲ್ಲಿ "ಅನ್ನ" ಸಿನಿಮಾ ವೀಕ್ಷಿಸಿದೆ.

 

ZEENEWS TRENDING STORIES

By continuing to use the site, you agree to the use of cookies. You can find out more by Tapping this link