ಮಧುಮೇಹವು ಒಂದು ಕಾಯಿಲೆಯಾಗಿದ್ದು, ಇದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಧುಮೇಹ ರೋಗಿಗಳಿಗೆ, ಅವರ ಆಹಾರಕ್ರಮವು ಬಹಳ ಮುಖ್ಯ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಅವರ ತೂಕವನ್ನು ಕಡಿಮೆ ಮಾಡುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಮಧುಮೇಹವು ಒಂದು ಕಾಯಿಲೆಯಾಗಿದ್ದು, ಇದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಧುಮೇಹ ರೋಗಿಗಳಿಗೆ, ಅವರ ಆಹಾರಕ್ರಮವು ಬಹಳ ಮುಖ್ಯ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಅವರ ತೂಕವನ್ನು ಕಡಿಮೆ ಮಾಡುತ್ತದೆ. ಮಧುಮೇಹ ರೋಗಿಗಳು ಸಕ್ಕರೆಯನ್ನು ನಿಯಂತ್ರಿಸಲು ತಮ್ಮ ನೆಚ್ಚಿನ ಆಹಾರ ಮತ್ತು ಪಾನೀಯಗಳನ್ನು ಕೆಲವೊಮ್ಮೆ ತ್ಯಜಿಸಬೇಕಾಗುತ್ತದೆ. ಅಂದಹಾಗೆ ಮಧುಮೇಹ ರೋಗಿಗಳಿಗೆ, ಮದ್ಯಪಾನವು ಹಾನಿಕಾರಕವಾಗಿದೆ.
ನಿಯಮಿತವಾಗಿ ಮದ್ಯಪಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಬಹುದು. ಆಲ್ಕೋಹಾಲ್ ನಿರ್ಜಲೀಕರಣಗೊಳಿಸುವ ಪಾನೀಯವಾಗಿದ್ದು, ಇದು ನಿರ್ಜಲೀಕರಣದ ಅಪಾಯವನ್ನು ಹೆಚ್ಚಿಸುತ್ತದೆ ಮತ್ತು ನಿಮಗೆ ಮಧುಮೇಹವಿದ್ದರೆ, ನಿರ್ಜಲೀಕರಣವು ನಿಮ್ಮ ಸಮಸ್ಯೆಗಳನ್ನು ಇನ್ನಷ್ಟು ಹದಗೆಡಿಸಬಹುದು.
ಮಧ್ಯಮ ಪ್ರಮಾಣದಲ್ಲಿ ಮದ್ಯ ಸೇವನೆ ಮಾಡಿದರೂ ಮಧುಮೇಹ ಬರುವ ಅಪಾಯ ಹೆಚ್ಚಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಹೆಚ್ಚು ಮದ್ಯಪಾನ ಮಾಡುವ ಜನರು ಹೃದಯ, ಮೂತ್ರಪಿಂಡ ಮತ್ತು ಶ್ವಾಸಕೋಶಗಳಿಗೆ ಹಾನಿಯನ್ನುಂಟುಮಾಡಬಹುದು. ಅತಿಯಾದ ಮದ್ಯ ಸೇವನೆಯೂ ಬೊಜ್ಜುತನವನ್ನು ಹೆಚ್ಚಿಸುತ್ತದೆ.
ಸಾಮಾನ್ಯವಾಗಿ, ಮಧುಮೇಹ ರೋಗಿಗಳು ಮದ್ಯಪಾನ ಮಾಡಬಾರದು. ವಿಶೇಷವಾಗಿ ಸಕ್ಕರೆ ಮಟ್ಟ ಹೆಚ್ಚಿರುವ ಜನರು. ವಿಶೇಷ ಸಂದರ್ಭಗಳಲ್ಲಿ ಅಥವಾ ಸಾಂದರ್ಭಿಕವಾಗಿ ಮದ್ಯಪಾನ ಮಾಡುವುದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು.
ಅತಿಯಾದ ಮದ್ಯಪಾನವು ಅಧಿಕ ರಕ್ತದೊತ್ತಡ ಮತ್ತು ಹೃದಯ, ಯಕೃತ್ತು ಮತ್ತು ಮೇದೋಜ್ಜೀರಕ ಗ್ರಂಥಿಗೆ ಹಾನಿಯನ್ನುಂಟುಮಾಡುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಕೂಡ ಹೆಚ್ಚಿಸಬಹುದು. ಆದ್ದರಿಂದ, ಮಧುಮೇಹ ರೋಗಿಗಳು ಮದ್ಯಪಾನ ಮಾಡದಿರುವುದು ಒಳ್ಳೆಯದು. ಒಂದು ವೇಳೆ ಮದ್ಯಪಾನ ಮಾಡಲು ಬಯಸಿದರೆ, ಬಹಳ ಕಡಿಮೆ ಪ್ರಮಾಣದಲ್ಲಿ ಮಾಡಿ,
ಮಧುಮೇಹ ರೋಗಿಗಳಿಗೆ ಡ್ರಿಂಕ್ಸ್ ಆಯ್ಕೆಯು ವ್ಯಕ್ತಿಯ ಆದ್ಯತೆಯನ್ನು ಅವಲಂಬಿಸಿರುತ್ತದೆ. ನೀವು ತಜ್ಞರ ಸಲಹೆಯನ್ನು ಅನುಸರಿಸಿದರೆ, ಸಿಹಿಯಾಗಿರುವ ಮದ್ಯಪಾನವನ್ನು ತಪ್ಪಿಸಿ. ಅದರ ಬದಲಾಗಿ ವೈನ್ ಕುಡಿಯಬಹುದು. ಇನ್ನು ವಿಸ್ಕಿ ಮತ್ತು ರಮ್ ಕುಡಿಯುವ ಬದಲು ವೋಡ್ಕಾ ಮತ್ತು ಜಿನ್ ಸೇವಿಸಬಹುದು.