2023ರ ವಿಶ್ವಕಪ್’ನಲ್ಲಿ ರನ್ ಸೋರಲು ಬಿಡದೆ ಅತಿ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್ ಯಾರು ಗೊತ್ತಾ?
ವಿಶ್ವಕಪ್ 2023ರಲ್ಲಿ ರನ್ ಸೋರಲು ಬಿಡದೆ ಅತಿ ಹೆಚ್ಚು ಡಾಟ್ ಬಾಲ್ ಎಸೆದ ಟಾಪ್ 5 ಬೌಲರ್ ಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.
ಈ ಪಟ್ಟಿಯಲ್ಲಿ ಭಾರತದ ಸ್ಟಾರ್ ಬೌಲರ್ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಅಗ್ರ ಸ್ಥಾನದಲ್ಲಿದ್ದಾರೆ. ಇವರು ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ 300 ಡಾಟ್ ಬಾಲ್’ಗಳನ್ನು ಎಸೆದು ಹೊಸ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.
ಇನ್ನು ನ್ಯೂಜಿಲೆಂಡ್’ನ ಟ್ರೆಂಟ್ ಬೋಲ್ಟ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು 9 ಪಂದ್ಯಗಳಲ್ಲಿ 290 ಡಾಟ್ ಬಾಲ್’ಗಳನ್ನು ಎಸೆದಿದ್ದಾರೆ.
ಅತಿ ಹೆಚ್ಚು ಡಾಟ್ ಬಾಲ್ ಎಸೆದ ಬೌಲರ್’ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ ಮೂರನೇ ಸ್ಥಾನದಲ್ಲಿದ್ದಾರೆ. 9 ಪಂದ್ಯಗಳಲ್ಲಿ 282 ಡಾಟ್ ಬಾಲ್ ಎಸೆದಿದ್ದಾರೆ.
ಇನ್ನು ಪಾಕಿಸ್ತಾನದ ಶಾಹೀನ್ ಅಫ್ರಿದಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 9 ಪಂದ್ಯಗಳಲ್ಲಿ 273 ಡಾಟ್ ಬಾಲ್’ಗಳನ್ನು ಎಸೆದಿದ್ದಾರೆ.
ಇನ್ನು ಆಸ್ಟ್ರೇಲಿಯಾ ವೇಗಿ ಜೋಶ್ ಹೇಜಲ್‌ವುಡ್ ಇದುವರೆಗೆ 273 ಡಾಟ್ ಬಾಲ್‌ಗಳನ್ನು ಎಸೆದಿದ್ದಾರೆ. ಆದರೆ ಸೆಮಿಫೈನಲ್ ಪಂದ್ಯದಲ್ಲಿ ಬೌಲಿಂಗ್ ಮಾಡಿದರೆ, ಶಾಹಿನ್ ಅಫ್ರಿದಿ ದಾಖಲೆ ಮುರಿಯುವ ಸಾಧ್ಯತೆ ಇದೆ.