ತನಿಖೆ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಡಿಕೆಶಿ ಅಲ್ಲ... ಇವರೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ..!?
ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆ ನಡೆಸುವಂತೆ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ? ಎಂಬ ಮಾತು ಭಾರೀ ಕೇಳಿಬರುತ್ತಿದೆ.
ಮತ್ತೊಂದೆಡೆ ಪ್ರತಿಪಕ್ಷ ನಾಯಕರು ಸಹ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಅಂದಹಾಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿಯಿಲ್ಲ. ಆದರೆ ಒಂದು ವೇಳೆ ತನಿಖೆ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಬೇಕಾದ ಪರಿಸ್ಥಿತಿ ಬಂದರೆ ಈ ಸುದ್ದಿ ಖಚಿತವಾಗುತ್ತದೆ.
ಇನ್ನೊಂದೆಡೆ ಸಿಎಂ ಸ್ಥಾನ ಖಾಲಿಯಾದರೆ ಆ ಸ್ಥಾನಕ್ಕೆ ಯಾರು ಬರಬಹುದು ಎಂಬ ಚರ್ಚೆಯೂ ಜೋರಾಗಿದೆ. ಈಗಾಗಲೇ ಡಿಕೆ ಶಿವಕುಮಾರ್ ಹೆಸರು ಕೇಳಿಬರುತ್ತಿದ್ದರೂ, ಇನ್ನೂ ಕೆಲ ನಾಯಕರ ಹೆಸರು ಮುಂಚೂಣಿಯಲ್ಲಿದೆ. ಅವರಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ ಪರಮೇಶ್ವರ್ ಸೇರಿದಂತೆ ಕೆಲವರ ಹೆಸರು ಇವೆ.
ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬ ಪ್ರಶ್ನೆಗೆ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ''ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಇದು ಬಿಜೆಪಿಯ ರಾಜಕೀಯ ಷಡ್ಯಂತ್ರ. ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ, ಬೆಂಬಲಿಸುತ್ತೇವೆ" ಎಂದಿದ್ದರು.
"ದೇಶ, ಪಕ್ಷ ಹಾಗೂ ರಾಜ್ಯಕ್ಕಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮತ್ತೊಮ್ಮೆ ಹೇಳುತ್ತಿದ್ದೇನೆ, ಸಿಎಂಗೆ ಹಿನ್ನಡೆ ಇಲ್ಲ. ನಾನು ಸೇರಿದಂತೆ ನಮ್ಮ ಎಲ್ಲಾ ನಾಯಕರ ಮೇಲೆ ಮೊದಲು ಇಂತಹ ಪಿತೂರಿ ನಡೆಸಲಾಗಿದೆ. ನಾನು ಮುಕ್ತನಾಗಿ ಹೊರಬಂದಿಲ್ಲವೇ?...ಹಾಗಾಗಿ, ನಾವು ಅದರ ವಿರುದ್ಧ ಹೋರಾಡುತ್ತೇವೆ. ನಾವು ಈ ದೇಶದ ಕಾನೂನು ವ್ಯವಸ್ಥೆಯನ್ನು ಗೌರವಿಸುತ್ತೇವೆ" ಎಂದಿದ್ದಾರೆ.
ಆದರೆ ಈ ಎಲ್ಲದರ ಜೊತೆಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಕೈ ಮೀರಿದರೆ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆಯಾಗುವ ಸಾಧ್ಯತೆ ಹೆಚ್ಚೇ ಇರುತ್ತದೆ.