Maxwell-Vini Raman: ಗ್ಲೆನ್ ಮ್ಯಾಕ್ಸ್​ವೆಲ್ ಕೈಹಿಡಿಯುತ್ತಿರುವ ವಿನಿ ರಾಮನ್ ಯಾರು?

ಆಸ್ಟ್ರೇಲಿಯಾದ ಆಲ್​ರೌಂಡರ್ ಹಾಗೂ ಆರ್​ಸಿಬಿ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಭಾರತೀಯ ಮೂಲದ ವಿನಿ ರಾಮನ್ ಜೊತೆ ಮುಂದಿನ ವರ್ಷ ಮದುವೆಯಾಗಲಿದ್ದಾರೆ.

ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ 8 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಚೊಚ್ಚಲ ಟ್ರೋಫಿ ಎತ್ತಿಹಿಡಿಯಿತು. ಆಸೀಸ್ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್​ವೆಲ್ ಗೆಲುವಿನ ರನ್ ಭಾರಿಸಿ ಸಂಭ್ರಮಿಸಿದ್ದರು. ಆಸ್ಟ್ರೇಲಿಯಾದ ಈ ಆಲ್​ರೌಂಡರ್ ಭಾರತೀಯ ಮೂಲದ ವಿನಿ ರಾಮನ್ ಜೊತೆ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಹಾಗಾದರೆ ಯಾರು ಈ ವಿನಿ ರಾಮನ್..? ಈ ಕುರಿತ ಮಾಹಿತಿ ಇಲ್ಲಿದೆ ನೋಡಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಕೈಹಿಡಿಯುತ್ತಿರುವುದು ವಿನಿ ರಾಮನ್. ವಿನಿ ರಾಮನ್ ತಮಿಳುನಾಡು ಮೂಲದವರಾಗಿದ್ದರೂ ಹುಟ್ಟಿ ಬೆಳೆದದ್ದೆಲ್ಲಾ ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ. ವಿಕ್ಟೋರಿಯಾದ ಮೆಂಟನ್ ಗರ್ಲ್ಸ್ ಸೆಕೆಂಡರಿ ಕಾಲೇಜಿನಲ್ಲಿ ಮೆಡಿಕಲ್ ಸೈನ್ಸ್ ಓದಿರುವ ವಿನಿ ಸದ್ಯ ಔಷಧ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

2 /5

ವಿನಿ ರಾಮನ್ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ ವಿವರಗಳ ಪ್ರಕಾರ, ಡಿಸೆಂಬರ್ 2013ರಂದು ಮೆಲ್ಬೋರ್ನ್ ಸ್ಟಾರ್ಸ್ ಈವೆಂಟ್‌ನಲ್ಲಿ ಇಬ್ಬರೂ ಭೇಟಿಯಾಗಿದ್ದರು. ಭಾರತೀಯ ಮೂಲದ ಹುಡುಗಿಯ ಬಗ್ಗೆ ಮೊದಲು ಆಸಕ್ತಿ ತೋರಿದ್ದು ಆಸೀಸ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್.           View this post on Instagram                       A post shared by VINI (@vini.raman)  

3 /5

ಗ್ಲೆನ್ ಮ್ಯಾಕ್ಸ್​ವೆಲ್ ಮತ್ತು ವಿನಿ ರಾಮನ್ 2017ರಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ. ವಿನಿ ಅವರಿಗೆ ಮೊದಲು ‘ಐ ಲವ್ ಯೂ’ ಅಂತಾ ಹೇಳಿದ್ದು ಮ್ಯಾಕ್ಸ್​ವೆಲ್ ಅಂತೆ.  

4 /5

ಇತ್ತೀಚೆಗಷ್ಟೇ ಭಾರತೀಯ ಸಂಪ್ರದಾಯದ ಪ್ರಕಾರ ನಿಶ್ಚಿತಾರ್ಥ ಮಾಡಿಕೊಂಡಿರುವ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಇವರಿಬ್ಬರು ಒಟ್ಟಿಗೆ ದೇಶ ಸುತ್ತಲು, ಪ್ರಯಾಣಿಸಲು ಇಷ್ಟಪಡುತ್ತಾರಂತೆ. ಪ್ಯಾರಿಸ್, ಲಂಡನ್, ಡಬ್ಲಿನ್, ನ್ಯೂಜಿಲೆಂಡ್ ಸೇರಿದಂತೆ ಅನೇಕ ದೇಶಗಳಿಗೆ ಭೇಟಿ ನೀಡಿದ್ದಾರೆ.

5 /5

2020ರ ಫೆಬ್ರವರಿ 21ರಂದು ನಿಶ್ಚಿತಾರ್ಥ ಮಾಡಿಕೊಂಡ ನಂತರ ಈ ಜೋಡಿ ಅದೇ ವರ್ಷ ಮದುವೆಯಾಗಲು ನಿರ್ಧರಿಸಿತ್ತು. ಆದರೆ ಕೊರೊನಾ ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ ಕಾರಣ ಈ ಜೋಡಿ ತಮ್ಮ ಮದುವೆಯ ದಿನಾಂಕವನ್ನು ಮುಂದೂಡಬೇಕಾಯಿತು. ಮುಂದಿನ ವರ್ಷ ಅಂದರೆ 2022ರ ಮಾರ್ಚ್-ಏಪ್ರಿಲ್ ಅವಧಿಯಲ್ಲಿ ಇಬ್ಬರೂ ಸಪ್ತಪದಿ ತುಳಿಯಲಿದ್ದಾರೆ.