ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿದರೆ ಗ್ಯಾರಂಟಿ ಯೋಜನೆ ಸ್ಥಗಿತಗೊಳ್ಳುತ್ತಾ? ಇಲ್ಲಿದೆ ಸ್ಪಷ್ಟ ಉತ್ತರ

guarantee scheme suspended if Siddaramaiah resigns?: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇದೀಗ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯದಲ್ಲಿ ಭಿನ್ನತೆ ಹೊಂದಿದ್ದು ಹೈ ಕಮಾಂಡ್ ಕಡೆ ರಾಜ್ಯ ನಾಯಕರು ಮುಖ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇದೀಗ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯದಲ್ಲಿ ಭಿನ್ನತೆ ಹೊಂದಿದ್ದು ಹೈ ಕಮಾಂಡ್ ಕಡೆ ರಾಜ್ಯ ನಾಯಕರು ಮುಖ ಮಾಡಿದ್ದಾರೆ.

2 /7

ಇವೆಲ್ಲದರ ಜೊತೆಗೆ ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ಮಹತ್ವದ ಬದಲಾವಣೆಯಾಗಲಿದ್ದು, ಕ್ಯಾಬಿನೆಟ್‌ ಪುನರ್‌ರಚನೆಯಾಗಲಿದೆ ಎಂಬ ಮಾತುಗಳು ಕೆಲವೊಂದು ಮೂಲಗಳಿಂದ ತಿಳಿದುಬರುತ್ತಿದೆ. ಆದರೆ ಈ ಬಗ್ಗೆ ರಾಜಕೀಯ ನಾಯಕರು ಅಲ್ಲಗಳೆಯುತ್ತಿದ್ದಾರೆ.  

3 /7

ಇನ್ನು ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಜನರಲ್ಲಿ ಕಾಡುತ್ತಿರುವ ಪ್ರಶ್ನೆ ಏನೆಂದರೆ, ʼಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿದರೆ ಗ್ಯಾರಂಟಿ ಯೋಜನೆ ಸ್ಥಗಿತವಾಗುತ್ತಾ?ʼ ಎಂಬುದು. ಇದಕ್ಕೆ ಉತ್ತರ ಇಲ್ಲಿದೆ.  

4 /7

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣ, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದ್ದ ಗ್ಯಾರಂಟಿ ಯೋಜನೆಗಳು. ಅಂತೆಯೇ ಅಧಿಕಾರಕ್ಕೆ ಬಂದ ಬಳಿಕ ಮಾತಿಗೆ ತಕ್ಕಂತೆ ನಡೆದುಕೊಂಡ ಕಾಂಗ್ರೆಸ್‌ ಸರ್ಕಾರ, ಶಕ್ತಿ ಯೋಜನೆಗಳನ್ನು ಜಾರಿಗೊಳಿಸಿತು. ಅದರಲ್ಲಿ ಬಹಳಷ್ಟು ಜನಪ್ರಿಯತೆ ಗಳಿಸಿದ್ದು ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ. ಮತ್ತು ಉಚಿತ ಬಸ್‌ ಪ್ರಯಾಣ ಸೌಲಭ್ಯ.  

5 /7

ಆದರೆ ಇದೀಗ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುತ್ತಿದೆ ಎಂಬ ಮಾತು ಎಲ್ಲೆಡೆ ಹರಿದಾಡುತ್ತಿದೆ. ಹೀಗಿರುವಾಗ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಗ್ಯಾರಂಟಿ ಯೋಜನೆಗಳ ಗತಿ ಏನು? ಎಂಬುದು ಜನರಲ್ಲಿ ಕಾಡುತ್ತಿರುವ ಪ್ರಶ್ನೆ.  

6 /7

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿದರೂ ಸಹ ಗ್ಯಾರಂಟಿ ಯೋಜನೆಗಳಿಗೆ ಸಮಸ್ಯೆಯಾಗುವುದಿಲ್ಲ. ಏಕೆಂದರೆ ಇದು ಕೇವಲ ಸಿದ್ದರಾಮಯ್ಯ ಅವರ ಚಿಂತನೆಯಾಗಿಲ್ಲ, ಇಡೀ ಕಾಂಗ್ರೆಸ್‌ ಪಕ್ಷವೇ ಒಮ್ಮತದಿಂದ ತೆಗೆದುಕೊಂಡು ಜಾರಿಗೊಳಿಸಿರುವ ಯೋಜನೆಗಳಾಗಿವೆ. ಹೀಗಿರುವಾಗ, ಅಧಿಕಾರಕ್ಕೆ ಯಾರೇ ಬಂದರೂ ಈ ಯೋಜನೆಗಳು ಮುನ್ನಡೆಸಿಕೊಂಡು ಹೋಗುತ್ತಾರೆ.

7 /7

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿರುವವರು ಡಿಕೆ ಶಿವಕುಮಾರ್‌, ಡಾ.ಜಿ ಪರಮೇಶ್ವರ್‌ ಮತ್ತು ಸತೀಶ್‌ ಜಾರಕಿಹೊಳಿ ಎಂದು ಹೇಳಲಾಗುತ್ತಿದೆ. ಈ ಮೂವರ ಹೆಸರು ಸದ್ಯ ಮುಂಚೂಣಿಯಲ್ಲಿದ್ದು, ಒಂದು ವೇಳೆ ಇವರಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಶಕ್ತಿ ಯೋಜನೆಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವಷ್ಟು ಶಕ್ತರಾಗಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಗೆ ಪೆಟ್ಟು ಬೀಳುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದೇ ಹೇಳಬಹುದು.