ಔಷಧಿ ಇಲ್ಲದೆಯೇ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟು ಕೊಳ್ಳಬಹುದು .!

Tue, 30 Aug 2022-9:38 am,

ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದರೆ, ದಿನಚರಿಯಲ್ಲಿ ವ್ಯಾಯಾಮವನ್ನು ಸೇರಿಸಿಕೊಳ್ಳಲೇಬೇಕು. ವ್ಯಾಯಾಮ ಮಾಡುವುದರಿಂದ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಹೋಗಲಾಡಿಸಲು, ಪ್ರತಿದಿನ 25-30 ನಿಮಿಷಗಳ ಕಾಲ ವ್ಯಾಯಾಮ ಮಾಡಬಹುದು. ವ್ಯಾಯಾಮವು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಿಸುವುದು ಮಾತ್ರವಲ್ಲ, ಇಡೀ ದೇಹದ ಆರೋಗ್ಯವನ್ನು ಉತ್ತಮಗೊಳಿಸುತ್ತದೆ.  

ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ರೋಗಿಗಳು ಕಡಿಮೆ ಉಪ್ಪು ಸೇವಿಸಬೇಕು. ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ಸೇವಿಸಿದರೆ ಅದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಹೆಚ್ಚಿನ ಉಪ್ಪಿನಂಶ ಹೊಂದಿರುವ ಆಹಾರ ಪದಾರ್ಥಗಳು, ಪ್ಯಾಕ್ ಮಾಡಿದ ಚಿಪ್ಸ್‌ನಂತಹ ಜಂಕ್ ಫುಡ್‌ಗಳನ್ನು ಸೇವಿಸಬಾರದು.

ನೀವು ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದರೆ, ನೀವು ಆಲ್ಕೊಹಾಲ್ ಸೇವಿಸಬಾರದು. ಆಲ್ಕೋಹಾಲ್ ಸೇವಿಸುವುದರಿಂದ ಸಮಸ್ಯೆ ಇನ್ನಷ್ಟು ಹೆಚ್ಚಬಹುದು. ಅಧಿಕ ರಕ್ತದೊತ್ತಡದ ಸಂದರ್ಭದಲ್ಲಿ ಆಲ್ಕೋಹಾಲ್ ಕುಡಿಯುವುದು ಮಾರಣಾಂತಿಕವಾಗಿ ಪರಿಣಮಿಸಬಹುದು.   

ಅಧಿಕ ರಕ್ತದೊತ್ತಡ ರೋಗಿಗಳು ಒತ್ತಡವನ್ನು ತೆಗೆದುಕೊಳ್ಳಬಾರದು. ಉದ್ವೇಗಕ್ಕೆ ಒಳಗಾಗುವ ಜನರು ಹೆಚ್ಚು ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಒತ್ತಡವು ಅನೇಕ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಒತ್ತಡವನ್ನು ಕಡಿಮೆ ಮಾಡಲು ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯಿರಿ. 

ಔಷಧ ತಿನ್ನದೆ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಮುಕ್ತಿ ಪಡೆಯಬೇಕಾದರೆ  ದಿನಚರಿಯಲ್ಲಿ ಆರೋಗ್ಯಕರ ಆಹಾರ ಕ್ರಮವನ್ನು ಸೇರಿಸಿಕೊಳ್ಳಬೇಕು. ಆಹಾರದಲ್ಲಿರುವ ಪೋಷಕಾಂಶಗಳು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ವಿಟಮಿನ್‌ಗಳು ಮತ್ತು ಪೋಷಕಾಂಶಗಳು ರಕ್ತದೊತ್ತಡವನ್ನು ನಿಯಂತ್ರಿಸುವುದರ ಜೊತೆಗೆ ನಿಮ್ಮ ಇಡೀ ದೇಹವನ್ನು ಆರೋಗ್ಯವಾಗಿರಿಸುತ್ತದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link