ಕ್ಯಾಲ್ಸಿಯಂ ಕೊರತೆ ನೀಗಿಸಲು ಮಹಿಳೆಯರು ತಿನ್ನಲೇಬೇಕಾದ ಆಹಾರಗಳಿವು
30 ವರ್ಷ ಸಮೀಪಿಸುತ್ತಿದ್ದಂತೆ ಮೂಳೆಗೆ ಸಂಬಂಧಿಸಿದ ಹಲವು ಆರೋಗ್ಯ ಸಮಸ್ಯೆಗಳು ಬಾಧಿಸಬಹುದು. ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆಯಿಂದಾಗಿ ಈ ಸಮಸ್ಯೆ ಉಂಟಾಗುತ್ತದೆ.
ದುರ್ಬಲ ಉಗುರುಗಳು, ಮುಟ್ಟಿನ ಸಮಯದಲ್ಲಿ ಅತಿಯಾದ ಹೊಟ್ಟೆನೋವು, ಸ್ನಾಯು ಸೆಳೆತ, ಅತಿಯಾದ ಬಳಲಿಕೆಯಂತಹ ಲಕ್ಷಣಗಳು ಮಹಿಳೆಯರಲ್ಲಿ ಕಂಡು ಬರುವ ಕ್ಯಾಲ್ಸಿಯಂ ಕೊರತೆಯ ಪ್ರಮುಖ ಲಕ್ಷಣಗಳಾಗಿವೆ.
ಕೆಲವು ಆಹಾರಗಳ ಸೇವನೆಯಿಂದ ಮಹಿಳೆಯರಲ್ಲಿ ಕಂಡು ಬರುವ ಕ್ಯಾಲ್ಸಿಯಂ ಕೊರತೆಯನ್ನು ಸುಲಭವಾಗಿ ಪರಿಹರಿಸಬಹುದು.
ಬೀನ್ಸ್, ಕಡಲೆಬೀಜಗಳಲ್ಲಿ ಕ್ಯಾಲ್ಸಿಯಂ ಜೊತೆಗೆ ಪ್ರೊಟೀನ್, ಫೈಬರ್ ಕೂಡ ಸಮೃದ್ಧವಾಗಿರುವುದರಿಂದ ಇದು ಮಹಿಳೆಯರ ಆರೋಗ್ಯಕ್ಕೆ ತುಂಬಾ ಲಾಭದಾಯಕವಾಗಿದೆ.
ಮಹಿಳೆಯರು ತಮ್ಮ ದೈನಂದಿನ ಆಹಾರದಲ್ಲಿ ಡೈರಿ ಉತ್ಪನ್ನಗಳನ್ನು ಬಳಸುವುದರಿಂದ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಬಹುದು.
ವಿಟಮಿನ್ ಡಿಯ ಅತ್ಯುತ್ತಮ ಮೂಲವಾಗಿರುವ ಸಾಲ್ಮನ್ ಮೀನುಗಳಲ್ಲಿ ಕ್ಯಾಲ್ಸಿಯಂ ಕೂಡ ಇರುತ್ತದೆ. ಇದರ ಸೇವನೆಯಿಂದ ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ ನೀಗಿಸುವುದಷ್ಟೇ ಅಲ್ಲ, ತೂಕವನ್ನು ಸಹ ನಿಯಂತ್ರಿಸಬಹುದು.
ವಿಟಮಿನ್ ಸಿ, ಡಿ ಹೇರಳವಾಗಿರುವ ಕಿತ್ತಳೆ ಹಣ್ಣಿನ ರಸದಲ್ಲಿ ನಮ್ಮ ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಕೂಡ ಕಂಡು ಬರುತ್ತದೆ. ಇದು ಮಹಿಳೆಯರ ಆರೋಗ್ಯ ವೃದ್ಧಿಗೆ ಪ್ರಯೋಜನಕಾರಿ ಆಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.