ವಿಶ್ವಕಪ್ 12 ಆವೃತ್ತಿಯಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲ ಸೆಮಿಫೈನಲ್ ಪಂದ್ಯವನ್ನು ಮಂಗಳವಾರ ಆಡಲು ಭಾರತ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಜನರು ಸಂಗಮದಲ್ಲಿ ಪೂಜೆ ಮಾಡುವ ಮೂಲಕ ಹಾಗೂ ದರ್ಗಾದಲ್ಲಿ ಚಾದರ್ ಅರ್ಪಿಸುವ ಮೂಲಕ ಭಾರತ ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ವಿಶ್ವಕಪ್ 2019: ನ್ಯೂಜಿಲೆಂಡ್ ವಿರುದ್ಧ ಮಂಗಳವಾರ(ಜುಲೈ 9) ಮ್ಯಾಂಚೆಸ್ಟರ್‌ನಲ್ಲಿ ಭಾರತ ಮೊದಲ ಸೆಮಿಫೈನಲ್ ಪಂದ್ಯವನ್ನು ಆಡಲು ಸಜ್ಜಾಗಿದೆ. ವಿರಾಟ್ ಕೊಹ್ಲಿ ನೇತೃತ್ವದ ಭಾರತೀಯ ತಂಡವು ಇಂದು ಸಂಜೆ ಓಲ್ಡ್ ಟ್ರ್ಯಾಫೋರ್ಡ್ನಲ್ಲಿ ಕೇನ್ ವಿಲಿಯಮ್ಸನ್ ಅವರ ತಂಡದ ವಿರುದ್ಧ ಗೆಲುವು ಸೆಣಸಲು ಸಿದ್ಧವಾಗಿದೆ. ಈ ಬೆನ್ನಲ್ಲೇ ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ಭಾರತ ತಂಡದ ಗೆಲುವಿಗಾಗಿ ಹಿಂದೂಗಳು ಸಂಗಮದಲ್ಲಿ ಹೋಮ, ಹವನದ ಮೂಲಕ ಪೂಜೆ ಸಲ್ಲಿಸಿದರೆ, ಮುಸ್ಲಿಂ ಬಾಂಧವರು ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ನ್ಯೂಜಿಲೆಂಡ್ ವಿರುದ್ಧ ಭಾರತದ ವಿಜಯಕ್ಕಾಗಿ ಪ್ರಯಾಗರಾಜ್ ನ ತ್ರಿವೇಣಿ ಸಂಗಮದಲ್ಲಿ ಪ್ರಾಥನೆ ಸಲ್ಲಿಸಲಾಯಿತು.
ಭಾರತವು ಫೈನಲ್‌ಗೆ ಪ್ರವೇಶಿಸಲು ಮತ್ತು ವಿಶ್ವಕಪ್ ಟ್ರೋಫಿ ಗೆಲ್ಲಲು ಸಹಾಯ ಮಾಡುವಂತೆ ಕೋರಿ ಜನರು ದರ್ಗಾದಲ್ಲಿ ಚಾದರ್ ಅರ್ಪಿಸಿದರು.
ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಗೆಲುವಿನ ಬಗ್ಗೆ ಎಲ್ಲರೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 15 ಸದಸ್ಯರ ತಂಡದಲ್ಲಿ ಕ್ಯಾಪ್ಟನ್ ಕೊಹ್ಲಿ ಮತ್ತು ಜಸ್ಪ್ರಿತ್ ಬುಮ್ರಾ ಎಲ್ಲರ ಫೇವರೆಟ್ ಆಟಗಾರರಾಗಿದ್ದಾರೆ.